ನಗರಸಭೆ ಆಯುಕ್ತರ ವಿರುದ್ಧ ಕ್ರಮಕ್ಕೆ ಒತ್ತಾಯ
ಕ.ಪ್ರ.ವಾರ್ತೆ , ಕೋಲಾರ , ಆ.21
ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾಗಿರುವ ಹಣವನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳದೆ ಹಣವನ್ನು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ 10 ಲಕ್ಷ ಚೆಕ್ ನೀಡಿರುವ ನಗರಸಭೆ ಆಯುಕ್ತರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯು ಜಿಲ್ಲಾಧಿಕಾರಿ ಅವರನ್ನು ಒತ್ತಾಯಿಸಿತು.
ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿದ ದಸಂಸ ಮುಖಂಡರು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾಗಿರುವ ಹಣವನ್ನು ಇತರೆ ಉದ್ದೇಶಗಳಿಗೆ ನೀಡಿರುವುದು ಸರಿಯಲ್ಲವೆಂದು ಆಯುಕ್ತ ವಿರುದ್ಧ ದೂರಿದರು.
ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಚೆಕ್ ನೀಡಿಕೆ ಕುರಿತು ತನಿಖೆ ನಡೆಸಲು ಸೂಚಿಸಿದ್ದು, ಜಿಲ್ಲಾಧಿಕಾರಿಗಳು ಆದಷ್ಟು ಬೇಗನೆ ತನಿಖೆ ನಡೆಸಿ ಆಯುಕ್ತರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಇಲ್ಲದೇ ಹೋದರೆ ಅಧಿಕಾರಿಯ ವಿರುದ್ಧ ಸಂಘಟನೆವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆಯೆಂದು ಎಚ್ಚರಿಸಿದರು.
ದಸಂಸ ತಾಲೂಕು ಸಂಚಾಲಕ ಹಾರೋಹಳ್ಳಿ ರವಿ, ಸಿ.ವಿ. ನಾಗರಾಜ್, ವರದೇನಹಳ್ಳಿ ವೆಂಕಟೇಶ್, ಬೀರಮಾನಹಳ್ಳಿ ವೆಂಕಟೇಶ್, ಅಪ್ಪಿ ನಾರಾಯಣಸ್ವಾಮಿ, ಮಾರ್ಜೇನಹಳ್ಳಿ ಬಾಬು, ಅಬ್ಬಣಿ ಕೆ.ನಾಗರಾಜು, ಮಲ್ಲಸಂದ್ರ ವೆಂಕಟಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

