ಕಾರ್ಪೊರೇಟ್ ಕಂಪನಿಗಳ ಪರ ಕೇಂದ್ರ ಸರ್ಕಾರ
ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಬಡ ಸಾಮಾನ್ಯ ವರ್ಗದವರ ಪರವಾಗಿ ಆಡಳಿತ ನೀತಿಗಳನ್ನು ರೂಪಿಸದೇ ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಆರೋಪಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಎಡಪಕ್ಷಗಳ ಪರ್ಯಾಯ ಆಡಳಿತ ನೀತಿಗಳ ಕುರಿತ ಚರ್ಚೆಯ ಜಿಲ್ಲಾ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
2020 ಕ್ಕೆ ಭಾರತ ಅಭಿವೃದ್ಧಿಯನ್ನು ಹೊಂದಿದ ದೇಶವಾಗುತ್ತದೆ ಎಂದು ಹೇಳಲಾಗುತ್ತಿದೆ. ವಾಸ್ತವವಾಗಿ ಕೇಂದ್ರ ಸರ್ಕಾರದ ನೀತಿಗಳಿಂದ ಕಾರ್ಪೋರೇಟ್ ಕಂಪನಿಗಳು, ಬಂಡವಾಳಶಾಹಿಗಳು ಆರ್ಥಿಕವಾಗಿ ಕೋಟ್ಯಂತರ ರೂಗಳನ್ನು ಸಂಪಾದನೆ ಮಾಡಿ ಶ್ರೀಮಂತಿಕೆಯನ್ನು ಹೆಚ್ಚಿಸಿಕೊಳ್ಳುತ್ತಿವೆ.
ಆದರೆ, ಬೆಲೆ ಏರಿಕೆಯ ಹೊಡೆತಕ್ಕೆ ಸಿಲುಕಿ ನಲುಗುತ್ತಿರುವ ಬಡವರು ಇನ್ನೂ ಬಡವರಾಗುತ್ತ ಆರ್ಥಿಕವಾಗಿ ತೀರಾ ಕೆಳಮಟ್ಟಕ್ಕೆ ಇಳಿಯುತ್ತಿದ್ದಾರೆ ಎಂದರು.
ಸಾಮಾನ್ಯ ಬಡಜನರು ಬೆಲೆ ಏರಿಕೆಯಿಂದ ತೀವ್ರ ಸಮಸ್ಯೆಯನ್ನು ಎದುರಿಸುವುದು, ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು, ಇಲ್ಲವೇ ಕೃಷಿಯಿಂದ ದೂರವಾಗುತ್ತಿದ್ದಾರೆ. ಬಡವರು ಆರ್ಥಿಕ ದುಸ್ಥಿತಿಯಿಂದ ತತ್ತರಿಸುತ್ತಿದ್ದರೂ ದೇಶದಲ್ಲಿ ಸಮರ್ಪಕವಾಗಿ ಬಡವರ ಬಗ್ಗೆ ಚರ್ಚೆಗಳಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸಿಪಿಐ(ಎಂ) ಮುಖಂಡರಾದ ವಿ.ಜೆ.ನಾಯರ್, ಸಿದ್ಧಗಂಗಪ್ಪ, ಮುನಿವೆಂಕಟಪ್ಪ ಮುಂತಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

