ಕಸಾಪದಿಂದ ರಚನಾತ್ಮಕ ಕಾರ್ಯಗಳು ಇನ್ನೂ ಹೆಚ್ಚಾಗಲಿ: ಡಿ.ಸಿ. ವಿಶ್ವನಾಥ್
ಕ.ಪ್ರ.ವಾರ್ತೆ , ಕೋಲಾರ , ಆ.23
ಕನ್ನಡ ಸಾಹಿತ್ಯ ಪರಿಷತ್ತಿಗೆ ಒಳ್ಳೆಯ ಹೆಸರಿದ್ದು, ಪ್ರತಿಯೊಬ್ಬರನ್ನು ಬೆಳೆಸುವ ಮೂಲಕ ಈ ಸಂಸ್ಥೆಗೆ ಹೆಚ್ಚಿನ ಕೀರ್ತಿ ತಂದುಕೊಡುವಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ನಿರ್ಗಮಿತ ಜಿಲ್ಲಾಧಿಕಾರಿ ಡಾ.ಡಿ.ಎಸ್.ವಿಶ್ವನಾಥ್ ಸಲಹೆ ನೀಡಿದರು.
ನಗರದ ಸರ್ಕಾರಿ ಕಿರಿಯ ಕಾಲೇಜಿನಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪರಿಷತ್ತಿನಿಂದ ರಚನಾತ್ಮಕವಾದ ಕಾರ್ಯಗಳು ಹೆಚ್ಚಾಗಿ ನಡೆಸುವ ಮೂಲಕ ಪ್ರತಿಯೊಬ್ಬರು ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಬೆಳೆಯುವ ವಾತಾವರಣ ನಿರ್ಮಿಸುವಂತೆ ತಿಳಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆಂಟ್ ಮರಿಸ್ವಾಮಿ ಮಾತನಾಡಿ, ಡಾ.ವಿಶ್ವನಾಥ್ ಅವರು, ಸಾಹಿತ್ಯ ಸೇವೆಯ ಜತೆಗೆ ಜಿಲ್ಲೆಯನ್ನು ಅಭಿವೃದ್ಧಿಪಡಿಸುವ ವಿಚಾರದಲ್ಲೂ ಎಲ್ಲರ ಗಮನ ಸೆಳೆದಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ಜೆ.ಜಿ.ನಾಗರಾಜ, ಡಾ.ವಿಶ್ವನಾಥ್ ಅವರು ಕಳೆದ 16 ತಿಂಗಳಿಂದ ಜಿಲ್ಲಾ ಕಸಾಪಕ್ಕೆ ಮಹಾ ಪೋಷಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಸಹಾಯದಿಂದಾಗಿ ಅನೇಕ ಉತ್ತಮ ಕಾರ್ಯಕ್ರಮ ನಡೆಸಲು ಸಾಧ್ಯವಾಯಿತು. ಮುಂದೆಯೂ ಇವರ ಆಶಯದಂತೆ ಪರಿಷತ್ತಿನ ಕಾರ್ಯಕ್ರಮಗಳನ್ನು ಆಯೋಜಿಸುವುದಾಗಿ ತಿಳಿಸಿದರು.
ಪರಿಷತ್ತಿನ ಜಿಲ್ಲಾ ಮತ್ತು ತಾಲೂಕಿನ ಪದಾಧಿಕಾರಿಗಳು ಇದ್ದರು. ಗೌರವ ಕಾರ್ಯದರ್ಶಿ ಮಾಲೂರು ಅಶ್ವತ್ಥರೆಡ್ಡಿ ನಿರೂಪಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಡಾ.ಡಿ.ಎಸ್.ವಿಶ್ವನಾಥ್ ಅವರಿಗೆ ಸುಮಾರು 2500 ಬೆಲೆಯ ಕುಮಾರವ್ಯಾಸ ಭಾರತ ಗ್ರಂಥವನ್ನು ನೆನಪಿನ ಕಾಣಿಕೆಯಾಗಿ ನೀಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

