ದಲಿತ ಕಾಲೋನಿಗಳ ಅಭಿವೃದ್ಧಿಗೆ ಶ್ರಮ: ವರ್ತೂರು
ಕೋಲಾರ: ದಲಿತ ಕಾಲೋನಿಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿ ಅಲ್ಲಿನ ಜನರನ್ನು ಅಭಿವೃದ್ಧಿಪಡಿಸಲು ಸಾಕಷ್ಟು ಶ್ರಮ ವಹಿಸಿದ್ದೇನೆ ಎಂದು ಶಾಸಕ ವರ್ತೂರು ಪ್ರಕಾಶ್ ಹೇಳಿದರು.
ತಾಲೂಕಿನ ಮುದುವತ್ತಿ ಗ್ರಾಮದ ದಲಿತ ಕಾಲೋನಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿ, ಕ್ಷೇತ್ರದಲ್ಲಿ ಈ ಹಿಂದೆ ಅಧಿಕಾರ ಅನುಭವಿಸಿದವರು ದಲಿತರ ಉದ್ಧಾರಕ್ಕಾಗಿ ಯಾವುದೇ ಕ್ರಮ ಕೈಗೊಳ್ಳದೆ ಕೇವಲ ಈ ಸಮುದಾಯವನ್ನು ಕೀಳಾಗಿ ಕಾಣುವುದರಲ್ಲೇ ಕಾಲ ವ್ಯರ್ಥ ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ತಾವು ಶಾಸಕನಾದ ಮೇಲೆ ದಲಿತರನ್ನು ಆರ್ಥಿಕವಾಗಿ ಬಲಾಢ್ಯರನ್ನಾಗಿಸುವ ಉದ್ದೇಶದಿಂದ ಗಂಗಾ ಕಲ್ಯಾಣ ಯೋಜನೆಯಲ್ಲಿ 800 ಕೊಳವೆ ಬಾವಿ ಕೊರೆಯಿಸಿದ್ದೇನೆ, ಸರ್ಕಾರದ ಸವಲತ್ತುಗಳನ್ನು ಪ್ರಾಮಾಣಿಕವಾಗಿ ಅರ್ಹರಿಗೆ ತಲುಪಿಸುವ ಕೆಲಸ ಮಾಡಿದ್ದೇನೆ ಎಂದರು. ದಲಿತರು ವಾಸಿಸುವ ಕಾಲೋನಿಗಳಿಗೆ ಮೂಲ ಸೌಲಭ್ಯ ಕಲ್ಪಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ನನ್ನ ಕೈಲಾದಷ್ಟು ಕಷ್ಟಪಟ್ಟಿದ್ದೇನೆ ಎಂದರು ತಿಳಿಸಿದರು. ಬೆಗ್ಲಿ ಪ್ರಕಾಶ್, ರಘುರಾಂ, ತಾಪಂ ಉಪಾಧ್ಯಕ್ಷೆ ಸರಸ್ವತಿ ಮುನಿಕೃಷ್ಣ, ಗ್ರಾಪಂ ಅಧ್ಯಕ್ಷೆ ಅಶ್ವಥಮ್ಮ ನಾರಾಯಣಸ್ವಾಮಿ, ಸದಸ್ಯ ವೆಂಕಟನಾರಾಯಣಪ್ಪ, ವಡಿಗೇರಿ ಚಂದ್ರಪ್ಪ, ರಾಜಣ್ಣ, ಮಂಜು, ಆಂಜಿನಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

