ಕೃಷಿ ಹೊಂಡಗಳ ನಿರ್ಮಾಣಕ್ಕೆ ಒತ್ತಾಯ
ಕೋಲಾರ: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿರುವ ರೈತರ ಭೂಮಿಗಳಲ್ಲಿ ಕಣಷಿ ಹೊಂಡಗಳನ್ನು ನಿರ್ಮಿಸಿ ಮಳೆ ನೀರನ್ನು ಇಂಗುವಂತೆ ಮಾಡಬೇಕೆಂದು ಹಸಿರುಸೇನೆ ಜಿಲ್ಲಾಧ್ಯಕ್ಷ ಕೋಟಿಗಾನಹಳ್ಳಿ ಗಣೇಶಗೌಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಉದ್ಯೋಗಖಾತ್ರಿ ಯೋಜನೆಯಲ್ಲಿ ಸಾಕಷ್ಟು ಹಣ ಉಳಿಕೆಯಾಗುವುದಲ್ಲದೆ ಕೇಂದ್ರಕ್ಕೆ ವಾಪಸ್ಸು ಹೋಗುವುದನ್ನು ತಡೆಗಟ್ಟುವ ಸಲುವಾಗಿ ರೈತರ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿದರೆ ಅಂತರ್ಜಲ ಹೆಚ್ಚುವ ಜೊತೆಗೆ ರೈತರು ತರಕಾರಿ ಬೆಳೆಗಳನ್ನು ಬೆಳೆದುಕೊಳ್ಳುವರು. ಉದ್ಯೋಗ ಖಾತ್ರಿಯಲ್ಲಿರುವ ಹಣ ಕೇವಲ ಚರಂಡಿಗಳ ಸ್ವಚ್ಛತೆ ಹಾಗೂ ಇನ್ನಿತರೆ ಕೆಲಸಗಳಿಗೆ ಬಳಕೆ ಮಾಡುತ್ತಿರುವುದು ಕೇವಲ ಹಣ ಪೋಲಾಗುತ್ತದೆ. ಆದ್ದರಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರದಿ ತಯಾರಿಸುವಾಗ ಹೆಚ್ಚಾಗಿ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಲು ಅನುಮೋದನೆ ನೀಡಿ ಕೃಷಿ ಹೊಂಡಗಳನ್ನು ನಿರ್ಮಿಸಿದರೆ ಮಳೆ ನೀರನ್ನು ಸಂಗ್ರಹಿಸಬಹುದು. ಈ ನೀರಿನಿಂದ ಜಾನುವಾರುಗಳ ದಣಿವನ್ನು ಹಿಂಗಿಸಬಹುದಲ್ಲದೆ ರೈತರು ಸಣ್ಣಪುಟ್ಟ ಬೆಳೆಗಳನ್ನು ಬೆಳೆದು ತಮ್ಮ ಬಾಳನ್ನು ಹಸನಾಗಿಸಿಕೊಳ್ಳಬಹುದೆಂದು ಗಣೇಶಗೌಡ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ಬಿಸನಹಳ್ಳಿ ಬೈಚೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲೂರು ಎ.ಅಶ್ವತ್ಥರೆಡ್ಡಿ, ಜಿಲ್ಲಾ ಗೌರವಾಧ್ಯಕ್ಷ ತೆರನಹಳ್ಳಿ ವೆಂಕಟೇಶಗೌಡ, ಮಾಸ್ತೇನಹಳ್ಳಿ ನಾರಾಯಣಸ್ವಾಮಿ, ಬೆಳಗಾನಹಳ್ಳಿ ಕೃಷ್ಣಪ್ಪ, ಕೋಲಾರ ತಾಲೂಕು ಅಧ್ಯಕ್ಷ ಹೊಳಲಿಹೊಸೂರು ಚಂದ್ರಪ್ಪ, ಕೋಲಾರ ತಾಲೂಕು ಕಾರ್ಯಾಧ್ಯಕ್ಷ ಅಗ್ರಹಾರ ಸೋಮರಸನಹಳ್ಳಿ ನಾರಾಯಣಸ್ವಾಮಿ, ದೊಡ್ನಹಳ್ಳಿ ಕೃಷ್ಣಪ್ಪ, ನಂಜುಂಡಪ್ಪ, ಸೈಯದ್ ಮಜೀಬ್ ಪಾಷ, ವಕೀಲ ಗೋವಿಂದಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

