ಬಡ ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರ ಅಗತ್ಯ: ಶಾಸಕ
ಮಾಲೂರು: ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಶುಲ್ಕ ಭರಿಸಲಾಗದೆ ಉನ್ನತ್ತ ಶಿಕ್ಷಣದಿಂದ ವಂಚಿತರಾಗುತ್ತಿರುವುದು ಖೇದಕರವಾಗಿದ್ದು, ದಾನಿಗಳು ಈ ನಿಟ್ಟಿನಲ್ಲಿ ಬಡ ವಿದ್ಯಾರ್ಥಿಗಳನ್ನು ಸಹಕರಿಸಬೇಕು ಎಂದು ಶಾಸಕ ಮಂಜುನಾಥ್ ಗೌಡ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ವಿದ್ಯಾರ್ಥಿ ಸಾಂಸ್ಕೃತಿಕ ಸಂಘ ಹಾಗೂ ಎನ್ಎಸ್ಎಸ್ ಘಟಕ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿಗೆ 18 ಲಕ್ಷಗಳಲ್ಲಿ ಇತರೆ ಸಮಾನ ಮನಸ್ಕರರೊಡನೆ ಎರಡು ಕೊಠಡಿ ನಿರ್ಮಿಸಿಕೊಟ್ಟ ಬಾಪೂಜಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ. ವೆಂಕಟೇಶ್ ಮಾತನಾಡಿ, ವ್ಯಾಸಂಗ ಮಾಡಿದ ಈ ಶಾಲೆಯ ಋಣ ತೀರಿಸುವ ಸಲುವಾಗಿ ಕೊಠಡಿ ನಿರ್ಮಿಸಲಾಗಿದ್ದು, ಇರುವ ಅಲ್ಪಕಾಲದಲ್ಲಿ ಅಗತ್ಯಕ್ಕಿಂತ ಹೆಚ್ಚಿರುವುದನ್ನು ಹಂಚಿಕೊಂಡು ಬಾಳಿದರೆ ಸಿಗುವ ತೃಪ್ತಿ ದಾನಿಗಳಲ್ಲದೇ ಇತರರಿಗೆ ಸಿಗದು ಎಂದರು.
ಕಾಲೇಜು ಸಮಿತಿ ಅಧ್ಯಕ್ಷ ರಾಜರಾಂ, ಪ್ಲಾಸ್ಟಿಕ್ ನಿರ್ಮೂಲನಾ ಸಮಿತಿ ಅಧ್ಯಕ್ಷ ಮುನಿಸ್ವಾಮಿ,ನಾರಾಯಣಸ್ವಾಮಿ, ಪರಮೇಶ್ವರ್ ಮಾತನಾಡಿದರು. ದಾನಿಗಳಿಗೆ ಸನ್ಮಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಕಾಲೇಜು ಸಮಿತಿಯವರು ಇದೇ ಪ್ರಥಮ ಬಾರಿಗೆ ಕಾಲೇಜಿಗೆ ಭೇಟಿ ನೀಡಿದ್ದ ನೂತನ ಶಾಸಕ ಮಂಜುನಾಥ್ ಗೌಡ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು. ಪುರಸಭೆ ಸದಸ್ಯ ಸೋಮಣ್ಣ, ಜೆಡಿಎಸ್ ಹಿರಿಯ ಮುಖಂಡ ನಂಜೇಗೌಡ, ಎಂ.ಪಿ.ನಾಗರಾಜ್, ಬುಲೆಟ್ ವೆಂಕಟೇಶ್ ಇದ್ದರು. ಪ್ರಾಂಶುಪಾಲ ರಾಮಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಮಾ. ವೆಂ. ನಾಗರಾಜಯ್ಯ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

