45 ಕೋಟಿ 'ಋಣಮುಕ್ತ' ಮನ್ನಾ: ಡಿಸಿ
ಕನ್ನಡಪ್ರಭವಾರ್ತೆ,ಕೋಲಾರ,ಆ.26
ಋಣ ಮುಕ್ತ ಯೋಜನೆಯಡಿ ದೇವರಾಜ ಅರಸು ಅಭಿವೃದ್ಧಿ ನಿಗಮ ಮತ್ತು ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಜಿಲ್ಲೆಗೆ ಒಟ್ಟು 45ಕೋಟಿ ರು. ಸಾಲ ಮನ್ನಾ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಿ.ಕೆ.ರವಿ ಹೇಳಿದರು.
ನಗರದ ಜಿ.ಪಂ. ಸಭಾಂಗಣದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ನೂರು ದಿನಗಳ ಸಾಧನೆಯ ಕಿರು ಹೊತ್ತಿಗೆ ನೂರು ದಿನ ನೂರಾರು ನಿರ್ಣಯ ಪುಸ್ತಕವನ್ನು ಸೋಮವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು.
ದೇವರಾಜ ಅರಸು ನಿಗಮದಿಂದ ಹಿಂದುಳಿದ ವರ್ಗಗಳ 13500 ಫಲಾನುಭವಿಗಳಿಗೆ 7 ಕೋಟಿ ರು, ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 60 ಸಾವಿರ ಫಲಾನುಭವಿಗಳಿಗೆ 38 ಕೋಟಿ ರು.ಗಳ ಸಾಲ ಮನ್ನಾ ಮಾಡಲಾಗಿದೆ ಎಂದು ವಿವರಿಸಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಒಟ್ಟು 2.87 ಲಕ್ಷ ಫಲಾನುಭವಿಗಳು 1 ರು.ದರದಲ್ಲಿ 10 ರಿಂದ 30 ಕೆಜಿ ಅಕ್ಕಿ ಪಡೆದುಕೊಳ್ಳುತ್ತಿದ್ದಾರೆ, ಕ್ಷೀರಭಾಗ್ಯ ಯೋಜನೆಯಲ್ಲಿ ವಾರದಲ್ಲಿ ಮೂರು ದಿನ ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಹಾಲನ್ನು ವಿತರಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ರೇಲ್ವೆ ಕೋಚ್ ಫ್ಯಾಕ್ಟರಿ ತಯಾರಿಸಲು ಸಚಿವ ಸಂಪುಟದ ಅನುಮೋದನೆ ದೊರೆತಿದ್ದು, ಜಮೀನು ಗುರುತಿಸಲಾಗಿದೆ. ಮೈತ್ರಿ ಯೋಜನೆಯಲ್ಲಿ ಅವಿವಾಹಿತ ಹಾಗೂ ವಿಚ್ಚೇದಿತ ಮಹಿಳೆಯರಿಗೆ ಆ.1 ರಿಂದ 500 ರು. ಮಾಶಾಸನ, ಮೈತ್ರಿ ಯೋಜನೆಯಲ್ಲಿ ಲಿಂಗತ್ಪ ಅಲ್ಪಸಂಖ್ಯಾತರಿಗೆ 500 ರು. ಮಾಶಾಸನ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

