ಮುಳಬಾಗಲು ಕಾಲೇಜಿನ ಮೂಲ ಸೌಕರ್ಯಕ್ಕೆ ಕ್ರಮ: ಶಾಸಕ ಕೊತ್ತೂರು ಮಂಜುನಾಥ್
ಕ.ಪ್ರ. ವಾರ್ತೆ, ಮುಳಬಾಗಲು, ಅ.29
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಎಲ್ಲಾ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ತೆಗೆದುಕೊಳ್ಳುವುದಾಗಿ ಶಾಸಕ ಕೊತ್ತೂರು ಮಂಜುನಾಥ್ ನುಡಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಲ್ಲಿ ಗುರುವಾರ ಏರ್ಪಡಿಸಿದ್ದ ಕ್ರೀಡಾ ಚಟುವಟೆಕೆಗಳ ಕಾರ್ಯಕ್ರಮವನ್ನು ಶಾಸಕ ಕೊತ್ತೂರು ಮಂಜುನಾಥ್ ಉದ್ಪಾಟಿಸಿ ಮಾತನಾಡಿದರು. ಕಾಲೇಜಿಗೆ ಅಗತ್ಯವಿರುವ ಕೊಠಡಿಗಳು, ಕೊರತೆ ಇರುವ ಉಪಾನ್ಯಾಸಕರನ್ನು ನೇಮಿಸಲು ಕ್ರಮ ತೆಗೆದುಕೊಳ್ಳಲಾಗುವುದು ಹಾಗೂ ಇದೇ ದಿವಸ ಕಾಲೇಜು ಅವರಣದಲ್ಲಿ ಕೊಳವೆಬಾವಿ ಕೊರೆಸಲು ಕ್ರಮ ತೆಗೆದು ಕೊಳ್ಳಲಾಗುವುದು ಎಂದು ನುಡಿದರು.
ಪ್ರಾಂಶುಪಾಲ ಜಮೀರ್ ಅಹಮದ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳು ಕಾಲೇಜಿನ ಹಲವಾರು ಸಮಸ್ಯೆಗಳನ್ನು ಬಗೆಹರಿಸಲು ಕೋರಿ ಮನವಿ ಪತ್ರ ಸಲ್ಲಿಸಿರು. ಪ್ರಾಧ್ಯಾಪಕರಾದ ಸಿ.ಉಮೇಶ್, ಕೆ. ಜಗನ್ನಾಥ್, ಅಲಂಗೂರು ಮಂಜುನಾಥ್, ಡಾ.ಎಚ್.ಎಸ್.ಮಧುಸೂಧನ್, ಎಸ್.ಆರ್. ವೆಂಕಟೇಶಪ್ಪ, ಪ್ರೊ. ಪುರುಷೋತ್ತಮ್, ಮಹಮದ್ ಇಲಿಯಾಸ್, ಡಾ. ಮುನಿರಾಜು ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

