ಶಾಶ್ವತ ನೀರಾವರಿ ಯೋಜನೆ ಜಾರಿ ಆಗ್ರಹ: ಇಂದು ರೈತರ ಸಮಾವೇಶ
ಬಂಗಾರಪೇಟೆ: ಶುಕ್ರವಾರ ಪಟ್ಟಣದ ಪುರಸಭೆ ಬಯಲು ರಂಗಮಂದಿರದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಕೇರಿದಂತೆ ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆಯನ್ನು ಸರ್ಕಾರ ಜಾರಿಗೆ ತರಬೇಕೆಂದು ಆಗ್ರಹಿಸಿಲು ರೈತ ಸಂಘ ಹಾಗೂ ಹಸಿರುವ ಸೇನೆ ವತಿಯಿಂದ ಬೃಹತ್ ರೈತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷ ರಾಮೇಗೌಡ ತಿಳಿಸಿದ್ದಾರೆ.
ಯಾವುದೇ ಸರ್ಕಾರ ಬಂದರೂ ಬರೀ ಬೂಟಾಟಿಕೆ ಮಾತಿನಲ್ಲಿ ಜನರನ್ನು ಮರಳು ಮಾಡುವ ಸಲುವಾಗಿ ಶಾಶ್ವತ ನೀರಾವರಿ ಮಾತನ್ನು ಚುನಾವಣೆ ಸಮಯದಲ್ಲಿ ಹೇಳುವರೇ ವಿನಃ ಯಾವುದೇ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸ್ಪಲ್ಪ ಮಟ್ಟಿಗೆ ಜನರಲ್ಲಿ ಆಶಾಭಾವನೆ ಮೂಡಿಸಿದೆ. ಇದನ್ನು ವಿಳಂಬ ಮಾಡದಂತೆ ತ್ವರಿತವಾಗಿ ಜಾರಿಗೆ ತರುವ ಸಲುವಾಗಿ ಸರ್ಕಾರದ ಮೇಲೆ ಹಾಗೂ ಜನಪ್ರತಿನಿಧಿಗಳ ಮೇಲೆ ಒತ್ತಡ ಹೇಲು ಈ ಸಮಾವೇಶ ಆಯೋಜಿಸಲಾಗಿದೆ ಎಂದು ಹೇಳಿ ಈ ಸಮಾವೇಶದಲ್ಲಿ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಅನೇಕ ರೈತ ಮುಖಂಡರು ಭಾಗವಹಿಸಲಿದ್ದಾರೆ.
ಸೆ. 8ರಂದು ಸಹಕಾರ ಸಂಘದ ಚುನಾವಣೆ
ಚಿಂತಾಮಣಿ: ತಾಲೂಕು ನಂದಿನಿ ಹಾಲು ಉತ್ಪಾದಕರ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಪ್ರಥಮ ಚುನಾವಣೆಯನ್ನು ಸೆ. 8 ರಂದು ನಡೆಸಲಾಗುವುದು ಎಂದು ಚುನಾವಣಾಧಿಕಾರಿ ಎಂ.ಉಷಾಭಾಯಿ ತಿಳಿಸಿದ್ದಾರೆ. ಪಟ್ಟಣದ ಆಜಾದ್ ಚೌಕ್ ಬಳಿ ಇರುವ ಸಹಕಾರಿ ಅಭಿವೃದ್ಧಿ ಅಧಿಕಾರಿ ಕಚೇರಿಯಲ್ಲಿ ನಾಮಪತ್ರ ಪಡೆಯಬಹುದು.
ಚುನಾವಣಾ ಕಾರ್ಯಸೂಚಿ: ಆ. 31ರವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅವಕಾಶವಿದೆ. ಸೆ. 1ರಂದು ನಾಮಪತ್ರ ಪರಿಶೀಲನೆ ಮತ್ತು ಸೆ. 2 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

