ನೊಂದ ಮಹಿಳೆಯರಿಗೆ ಸಾಂತ್ವನ ಜತೆ ಧೈರ್ಯ ತುಂಬಿ
ಕ.ಪ್ರ.ವಾರ್ತೆ , ಚಿಕ್ಕಬಳ್ಳಾಪುರ , ಆ. 30
ಸಮಾಜದಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸಾಂತ್ವನವನ್ನು ಹೇಳಿ ಧೈರ್ಯ ತುಂಬುವಂತಹ ಕೆಲಸವನ್ನು ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್ ತಿಳಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಸೌಖ್ಯ ಸಂಜೀವಿನಿ ಸಂಸ್ಥೆ ಮತ್ತು ಕರ್ನಾಟಕ ಆರೋಗ್ಯ ಸಂವರ್ಧನ ಪ್ರತಿಷ್ಠಾನಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ನಿರ್ಲಕ್ಷಿತ ಮಹಿಳೆಯರ ಮೇಲಿನ ದೌರ್ಜನ್ಯ ನಿವಾರಣೆ ಕುರಿತ ಪೊಲೀಸ್ ತರಬೇತಿ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಲೈಂಗಿಕ ಕಾರ್ಯಕರ್ತೆಯರಿಗೆ ಲೈಂಗಿಕ ಕಾಯಿಲೆ ನಿವಾರಣೆಗೆ ಗುಣಮುಖ ಹಾಗೂ ಪುನರ್ವಸತಿಗೆ ಆದ್ಯತೆ ನೀಡಬೇಕು. ಸರ್ಕಾರವು ಲೈಂಗಿಕಅಲ್ಪಸಂಖ್ಯಾತರಿಗೆ ಮಾಸಿಕ 500 ರು. ಗಳ ಮಾಸಾಶನ ನೀಡುತ್ತಿದೆ. ಇನ್ನೂ ನಿರ್ಲಕ್ಷಿತ ಮಹಿಳೆಯರಿಗೆ ಪಡಿತರ, ವಸತಿ, ಆರ್ಥಿಕ ಸೌಲಭ್ಯವನ್ನು ನೀಡುವುದು ಅಗತ್ಯವಿದೆ ಎಂದರು.
ಕೆ.ಹೆಚ್.ಪಿ.ಟಿ. ನಿರ್ದಶಕ ಅಶೋಕಾನಂದ್ ಮಾತನಾಡಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಯಾವುದೋ ಅನಿವಾರ್ಯ ಸಂದರ್ಭದಲ್ಲಿ ವೇಶ್ಯಾವಾಟಿಕೆ ಬಂದು ನಾನಾ ರೀತಿಯಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ ಎಂದ ಅವರು, ಚಿಕ್ಕಬಳ್ಳಾಪುರದಲ್ಲಿ 6 ತಂಡಗಳಲ್ಲಿ ಸುಮಾರು 270 ಪೊಲೀಸರಿಗೆಈ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸತ್ರ ನ್ಯಾಯಾಧೀಶ ಈರಣ್ಣವರ್, ಈ ತರಬೇತಿಯಿಂದ ಪೊಲೀಸ್ ಹಾಗೂ ನ್ಯಾಯಾಧೀಶರ ನಡುವೆ ಸಂಬಂಧ ಹತ್ತಿರವಾಗಿದ್ದು, ಒಟ್ಟಾಗಿ ಇಬ್ಬರೂ ಜನರ ಸಮಸ್ಯೆಗಳಿಗೆ ಅದರಲ್ಲೂ ನಿರ್ಲಕ್ಷಿತ ಮಹಿಳೆಯರ ರಕ್ಷಣೆಗೆ ಮುಂದಾಗಬೇಕು. ಮಹಿಳೆಯರಿಗೆ ಯಾವಾಗ ಮನೋಸ್ಥೈರ್ಯ, ಸ್ವಾವಲಂಬನೆಯ ಆಶಾಕಿರಣ ದೊರೆಯುತ್ತದೆಯೋ ಆಗ ದೇಶದ ಪ್ರಗತಿ ಸಾಧ್ಯ ಎಂದವರು ತಿಳಿಸಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಕೆ.ಹೆಚ್. ತಮ್ಮೇಗೌಡ, ನ್ಯಾಯಾಧೀಶರಾದ ರಾಜೇಶ್ವರಿ ಹೆಗಡೆ, ಅಮರನಾರಾಯಣ, ಸೌಖ್ಯ ಸಂಜೀವಿನಿ ಅಧ್ಯಕ್ಷೆ ಮಂಜುಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಂಗಸ್ವಾಮಿ, ಡಿ.ವೈ.ಎಸ್.ಪಿ. ದೇವಯ್ಯ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

