ಸೆ.15ಕ್ಕೆ ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದರಾಮಯ್ಯ ಶಿಲಾನ್ಯಾಸ
ಕೋಲಾರ: ಅವಿಭಜಿತ ಕೋಲಾರ ಜಿಲ್ಲೆಯ ಬಹು ನಿರೀಕ್ಷಿತ ಎತ್ತಿನಹೊಳೆ ಶಾಶ್ವತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.15 ರಂದು ಚಿಕ್ಕಬಳ್ಳಾಪುರದಲ್ಲಿ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇದೇ ದಿನ ಮುಖ್ಯಮಂತ್ರಿಗಳು ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕೆ.ಐ.ಡಿ.ಬಿ ಆಶ್ರಯದಲ್ಲಿ ಕೈಗಾರಿಕಾ ಕೇಂದ್ರದ ಶಿಲಾನ್ಯಾಸ ಮತ್ತು ಕೋಲಾರ ನಗರದಲ್ಲಿ ಜಿಲ್ಲಾಮಟ್ಟದ ಇಲಾಖೆಗಳ ಭವ್ಯ ಜಿಲ್ಲಾ ಸೌಧ ಕಟ್ಟಡಕ್ಕೂ ಶಿಲಾನ್ಯಾಸ ನೆರವೇರಿಸುವರು ಎಂದು ತಿಳಿಸಿದ್ದಾರೆ.
ಜಿಲ್ಲೆಯ ದಶಕಗಳ ಬೇಡಿಕೆಗೆ ಈಗಾಗಲೇ ಸರ್ಕಾರ ಸ್ಪಂದಿಸಿದ್ದು, ಎತ್ತಿನಹೊಳೆ ಯೋಜನೆಗೆ ಸಾವಿರ ಕೋಟಿ ನಿಗದಿ ಮಾಡಿದ್ದು, ಯೋಜನೆಯ ಶಂಕುಸ್ಥಾಪನೆ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ.
ಶಾಶ್ವತ ನೀರಾವರಿಗಾಗಿ ಪರಮಶಿವಯ್ಯ ವರದಿ ಅನುಷ್ಠಾನಕ್ಕೆ ಹೆಚ್ಚಿನ ಒತ್ತಡವಿದ್ದರೂ, ಕನಿಷ್ಠ ಎತ್ತಿನಹೊಳೆ ನೀರಾದರೂ ಜಿಲ್ಲೆಗೆ ಹರಿದು ಬಂದಲ್ಲಿ ಕೆಲ ಪ್ರದೇಶದ ಕೃಷಿಯ ಜತೆಗೆ, ಕುಡಿಯುವ ನೀರಿನ ಸಮಸ್ಯೆಗಾದರೂ ಪರಿಹಾರ ಸಿಗಬಹುದು ಎಂಬ ನಿರೀಕ್ಷೆ ಇಲ್ಲಿನ ಜನರದ್ದು.
ಜಿಲ್ಲಾ ಸೌಧ ನಿರ್ಮಾಣಕ್ಕೆ ಚಾಲನೆ: ಇದೆ ವೇಳೆ ನೂರಾರು ವರ್ಷಗಳ ಹಳೆಯದಾದ ಜಿಲ್ಲಾಧಿಕಾರಿ, ಖಜಾನೆ ಮತ್ತಿತರ ಇಲಾಖೆಗಳಿರುವ ಕಟ್ಟಡಗಳು ಶಿಥಿಲಗೊಂಡಿದ್ದು, ಜಿಲ್ಲೆಗೊಂದು ನೂತನ ಜಿಲ್ಲಾಸೌಧ ನಿರ್ಮಾಣಕ್ಕೆ ಚಾಲನೆ ಸಿಗಲಿದೆ. ಸ್ಥಳ ನಿಗಧಿಯಾಗದೆ ತೀವ್ರ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದ ಜಿಲ್ಲಾಸೌಧ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ನೆರವೇರಿಸಲು ಬರುತ್ತಿದ್ದು, 10 ಎಕರೆ ಪ್ರದೇಶದಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಇಲಾಖೆಗಳು ಒಂದೆಡೆ ಇರುವ ಭವ್ಯಸೌಧ ನಿರ್ಮಾಣಗೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

