ಚಿಂತಾಮಣಿ; ರೇಲ್ವೆ ಅಂಡರ್ 'ಫೇಲ್'
-ಎನ್.ಬಾಬು
ಚಿಂತಾಮಣಿ: ರೇಲ್ವೆ ಅಂಡರ್ ಪಾಸ್ ಕಳಪೆ ಕಾಮಗಾರಿ ಕಾರಣ ಮಳೆ ನೀರು ನಿಂತು ಹಳ್ಳ ಗುಂಡಿಗಳಿಂದ ಕೂಡಿದ್ದು, ಈ ಮಾರ್ಗವಾಗಿ ಸಂಚರಿಸುವ ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಆದರೂ ರೇಲ್ವೆ ಅಧಿಕಾರಿಗಳಾಗಲಿ ಅಥವಾ ಗುತ್ತಿಗೆದಾರರಾಗಲಿ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಚಿಂತಾಮಣಿ-ಬುಕ್ಕನಹಳ್ಳಿ, ತಿಮ್ಮಸಂದ್ರ ಮಾರ್ಗದ ರೇಲ್ವೆ ಅಂಡರ್ ಪಾಸ್ ರಸ್ತೆಯ ಕಳಪೆ ಕಾಮಗಾರಿ ಕಾರಣ, ರಸ್ತೆಯ ನೀರು ಸರಾಗವಾಗಿ ಹರಿಯದೆ ಅಂಡರ್ಪಾಸ್ ಬಳಿ ಹಳ್ಳ ಗುಂಡಿಗಳಾಗಿ ಸುಮಾರು 2 ರಿಂದ 3 ಅಡಿ ನೀರು ನಿಂತು ಸಂಚಾರಕ್ಕೆ ತೊಂದರೆಯಾಗಿದೆ. ಸಮಸ್ಯೆ ಬಗ್ಗೆ ರೇಲ್ವೆ ಅಧಿಕಾರಿಗಳು, ಗುತ್ತಿಗೆದಾರರಿಗೆ ಹಲವು ಬಾರಿ ಮನವಿ ನೀಡಿದ್ದರೂ ನಿರ್ಲಕ್ಷ್ಯ ತೋರಿದ ಪರಿಣಾಮ ಜನರಿಗೆ ಕೆಮ್ಮಣ್ಣಿನ ನೀರಿನ ನಿತ್ಯ ಅಭಿಷೇಕವಾಗುತ್ತಿದ್ದು, ಜನ ಶಾಪ ಹಾಕುತ್ತಿದ್ದಾರೆ.
ರಸ್ತೆ ಬದಿಯಲ್ಲಿ ನಾಮಕೇವಾಸ್ತೆ ನಿರ್ಮಿಸಿರುವ ಒಳ ಚರಂಡಿಯಲ್ಲಿ ನೀರು ಸಮರ್ಪಕವಾಗಿ ಹರಿಯದೆ ಇರುವುದರಿಂದ ಎತ್ತಿನಗಾಡಿ, ಸೈಕಲ್ ಹಾಗೂ ದ್ವಿಚಕ್ರ ವಾಹನ ಸವಾರರು ಬಿದ್ದು ತೀವ್ರ ಗಾಯಗೊಂಡಿರುವ ಉದಾಹರಣೆಗಳು ಸಾಕಷ್ಟಿವೆ. ಉದ್ಘಾಟನೆಗೆ ಮುನ್ನವೇ ರಸ್ತೆ ಕಾಮಗಾರಿಗಳ ಇಂತಹ ಪರಿಸ್ಥಿತಿ ಬಗ್ಗೆ ಸ್ಥಳೀಯ ಕೇಂದ್ರ ಸಚಿವರು ಖುದ್ದು ಭೇಟಿ ನೀಡಿ ಉತ್ತಮ ಕೆಲಸಕ್ಕೆ ಮುಂದಾಗಲಿ ಎಂಬುದು ನಾಗರಿಕರ ಅಭಿಪ್ರಾಯವಾಗಿದೆ. ಗುಣಮಟ್ಟದಿಂದ ಕೆಲಸ ನಿರ್ವಹಿಸದೆ ಇರುವುದೇ ಸಮಸ್ಯೆಗೆ ಕಾರಣವೆಂಬುದು ಸ್ಥಳೀಯ ನಾಗರಿಕರ ಆರೋಪ. ಮುಂದಾದರು ಸಂಬಂಧಪಟ್ಟ ಅಧಿಕಾರಿಗಳಾಗಲಿ, ಗುತ್ತಿಗೆದಾರನಾಗಲಿ ಗಮನ ಹರಿಸಬೇಕೆಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

