ಕೋಲಾರ

ನಗರ ಅಭಿವೃದ್ಧಿಗೆ 30 ಕೋಟಿ ಅನುದಾನ: ಸುಧಾಕರ್

Published On :

ಚಿಕ್ಕಬಳ್ಳಾಪುರ: ನಗರೋತ್ಥಾನ ಯೋಜನೆ ಅಡಿ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರದಿಂದ 30 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಡಾ. ಕೆ. ಸುಧಾಕರ್ ತಿಳಿಸಿದರು.
ಮುಖ್ಯಮಂತ್ರಿಗಳ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ಕಾರ್ಯಕ್ರಮದ ಅಡಿ ನಗರದ ಆರನೇ ವಾರ್ಡಿನಲ್ಲಿ ಅಂದಾಜು 80 ಲಕ್ಷ ಮೌಲ್ಯದ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಆದ್ಯತೆ ಮೇಲೆ ನಗರದ ಎಲ್ಲಾ ಭಾಗದಲ್ಲಿಯೂ ಕಾಲ ಕಾಲಕ್ಕೆ ಅಭಿವೃದ್ಧಿ ಕಾಮಗಾರಿ ಹಮ್ಮಿಕೊಳ್ಳಲಾಗುವುದು. ಒಟ್ಟಾರೆ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಇದಕ್ಕಾಗಿ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಕಾಮಗಾರಿಗಳು ನಡೆಯುವಾಗ ವಿಶೇಷ ಗಮನ ನೀಡಬೇಕು ಎಂದರು.
ನಗರದಲ್ಲಿ ಸದ್ಯ ನಡೆಯುತ್ತಿರುವ ಒಳಚರಂಡಿ ಕಾಮಗಾರಿಗಳ ಪರಿಶೀಲನೆ ಮಾಡಿದ್ದೇನೆ. ಶೀಘ್ರವಾಗಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ನಗರದಲ್ಲಿ ಏಳು ಓವರ್‌ಹೆಡ್ ಟ್ಯಾಂಕ್ ನಿರ್ಮಿಸುವ ಕಾರ್ಯ ಪೂರ್ಣಗೊಂಡಿದ್ದು, ಸದ್ಯದಲ್ಲೇ ಲೋಕಾರ್ಪಣೆಯಾಗಲಿದೆ.14 ಕಡೆ ಕೊಳವೆ ಬಾವಿ ಕೊರೆಸಲು ಅನುದಾನ ಬಿಡುಗಡೆ ಆಗಿದೆ. ಜಕ್ಕಲಮಡಗು ನೀರಿನ ಸಂಪರ್ಕ ಒದಗಿಸಲು 11 ಕೋಟಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ 75 ಲಕ್ಷ ಅನುದಾನ ಮಂಜೂರಾಗಿದೆ ಎಂದು ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆ ಅರಿಯಲು ನಗರ ಪ್ರದಕ್ಷಿಣೆ ಹಮ್ಮಿಕೊಳ್ಳುತ್ತೇನೆ. ಇನ್ನು ರಸ್ತೆಯ ಡಾಂಬರೀಕರಣ ಕಾರ್ಯ ಮಳೆಗಾಲ ಮುಗಿದ ತಕ್ಷಣ ಹಮ್ಮಿಕೊಳ್ಳಲು ಸೂಚಿಸುವುದಾಗಿ ಹೇಳಿದರು. ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ನಿರ್ದೇಶಕ ನಾಗರಾಜ ಶೆಟ್ಟಿ, ಮಾಜಿ ಶಾಸಕ ಎಸ್.ಎಂ. ಮುನಿಯಪ್ಪ, ನಗರಸಭೆ ಸದಸ್ಯೆ ನಿರ್ಮಲಾಪ್ರಭು ಮಾತನಾಡಿದರು. ಈ ಸಂದರ್ಭದಲ್ಲಿ ಪೌರಾಯುಕ್ತ ರುದ್ರಮುನಿ, ನಗರಸಭೆ ಸದಸ್ಯರಾದ ಜಿ.ಎನ್. ನಾರಾಯಣಸ್ವಾಮಿ, ಗಜೇಂದ್ರ, ಕೃಷ್ಣಮೂರ್ತಿ, ಸುಬ್ರಹ್ಮಣ್ಯಾಚಾರ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.