ಕೋಲಾರ

ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ

Published On :

ಬಂಗಾರಪೇಟೆ: ಪಟ್ಟಣದಲ್ಲಿರುವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ನಿಲಯದ ಅಡುಗೆ ಮನೆಯಲ್ಲಿದ್ದ ಪಾತ್ರೆ ಸಾಮಾನುಗಳನ್ನು ಹೊರಗೆ ಬಿಸಾಡಿ ಪ್ರತಿಭಟಿಸಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸಮಯಕ್ಕೆ ಊಟ ಹಾಕುವುದಿಲ್ಲ, ಕುಡಿಯಲು ನೀರಿಲ್ಲ, ಸ್ವಚ್ಛತೆ ಎಂಬುದು ಇಲ್ಲವೇ ಇಲ್ಲ. ನಿಲಯ ಪೂರ ದುರ್ನಾತದಿಂದ ಕೂಡಿದೆ. 80 ವಿದ್ಯಾರ್ಥಿಗಳಿರುವ ನಿಲಯದಲ್ಲಿ ಕೇವಲ ಒಂದೇ ಶೌಚಾಯಲ ಇದೆ. ಎಲ್ಲಾ ವಿದ್ಯಾರ್ಥಿಗಳು ಮಲಗಲು ಹಾಸಿಗೆಗಳಿಲ್ಲ. ಸಮರ್ಪಕ ತಟ್ಟೆ, ಲೋಟ ಇಲ್ಲ. ನಿಲಯದ ಮುಂದೆಯೇ ಚರಂಡಿ ನೀರು ಹರಿಯುವುದರಿಂದ ಸೊಳ್ಳೆಗಳ ಕಾಟ ಬೇರೆ ಇದೆ. ಇಷ್ಟೆಲ್ಲಾ ಸಮಸ್ಯೆಗಳ ನಡುವೆ ವಿದ್ಯಾರ್ಥಿಗಳು ತಮ್ಮ ಬದುಕನ್ನು ರೂಪಿಸಿಕೊಳ್ಳಬೇಕು. ಈ ವಿದ್ಯಾರ್ಥಿ ನಿಲಯ ಪಕ್ಕದಲ್ಲೆ ಸ್ಮಶಾನ ಇರುವುದರಿಂದ ರಾತ್ರಿ ವೇಳೆ ದೆವ್ವಗಳ ಕಾಟ ಸಹ ಇದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಈ ಹಾಸ್ಟೆಲನ್ನು ಬೇರೆಡೆ ಸ್ಥಳಾಂತರಿಸಿ ಎಂದು ಹತ್ತಾರು ಬಾರಿ ಮೇಲಾಧಿಕಾರಿಗಳಿಗೆ ತಿಳಿಸಿದ್ದರು ಸಹ ಗಮನ ಹರಿಸಿಲ್ಲ. ಕಾಲೇಜುಗಳಿಗೆ ಸಮಯಕ್ಕೆ ಹೋಗಲು ಆಗುತ್ತಿಲ್ಲ. ತಿಂಗಳಿಗೊಮ್ಮೆ ಆಹಾರ ಪದಾರ್ಥಗಳು ಇಲ್ಲಿಗೆ ಬರುವುದಿಲ್ಲ. ಪ್ರತಿದಿನ ಅಂಗಡಿಯಿಂದ ತಂದು ಊಟ ಮಾಡುವುದರಿಂದ ವಿಳಂಬಕ್ಕೆ ಕಾರಣವಾಗಿದೆ. ವಾರ್ಡ್‌ನ್ ಶಿವಕುಮಾರ್‌ರನ್ನು ಕೇಳಿದರೆ ಸಮರ್ಪಕವಾದ ಉತ್ತರ ಕೊಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೂ ಸಮಸ್ಯೆಗಳ ಬಗ್ಗೆ ದೂರು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ. ಶನಿವಾರ ಸಹ ಊಟ ವಿಳಂಬವಾಗಿ ಮಾಡಿದ್ದರಿಂದ ವಿದ್ಯಾರ್ಥಿಗಳು ವಿಳಂಬ ಧೋರಣೆಯನ್ನು ಖಂಡಿಸಿ ಅಡುಗೆ ಮಾಡುವ ಪಾತ್ರೆ ಹೊರಗೆ ಚೆಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಶಾಸಕರಿಗೆ ಆಗ್ರಹ: ನೂತನವಾಗಿ ಆಯ್ಕೆಯಾಗಿರುವ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಎಲ್ಲ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಮಕ್ಕಳ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಒಮ್ಮೆ ನಮ್ಮ ನಿಲಯಕ್ಕೂ ಬಂದು ನಮ್ಮ ಯಾತನೆ ನೋಡಿ ಅನುಕೂಲಗಳನ್ನು ಕಲ್ಪಿಸಲಿ ಎಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.