ಕೋಲಾರ

ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯ

Published On :

ಕೋಲಾರ: ಯಾದವ ಜನಾಂಗ ತಮ್ಮ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ಕಲ್ಪಿಸುವ ಮೂವಕ ಸಾಮಾಜಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಲು ಗಮನ ನೀಡಬೇಕೆಂದು ಜಿಲ್ಲಾ ಯಾದವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗೋಕುಲ ವಿ. ನಾರಾಯಣಸ್ವಾಮಿ ತಿಳಿಸಿದರು.
ನಗರದ ಟೇಕಲ್ ರಸ್ತೆ ಯಾದವ ಸಮುದಾಯ ಭವನದಲ್ಲಿ ಜಿಲ್ಲಾ ಹಾಗೂ ತಾಲೂಕು ಯಾದವ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಮಾತನಾಡಿ, ಪೋಷಕರು ತಮ್ಮ ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಿ, ಅವರಿಗೆ ಉನ್ನತ ವ್ಯಾಸಂಗ ಕೊಡಿಸಿ ಎಂದ ಅವರು, ಸಮುದಾಯದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಅಸ್ತ್ರ ಎಂದರು.
ಮಹಿಳಾ ಸಮಾಜ ಕಾಲೇಜಿನ ಪ್ರಾಂಶುಪಾಲ ನರಸಿಂಹಯ್ಯ, ಯಾದವ ಸಮುದಾಯದಲ್ಲಿ ಶೇ.1 ರಿಂದ 2 ರಷ್ಟು ಮಂದಿ ಇನ್ನು ಸರಿಯಾಗಿ ಶಿಕ್ಷಣ ಪಡೆಯಲಾಗಿಲ್ಲ ಎಂದು ವಿಷಾದಿಸಿದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ತಾಲೂಕು ಯಾದವ ಸಂಘದ ಅಧ್ಯಕ್ಷ ಕೆ.ಎಂ. ವೆಂಕಟರಮಣಪ್ಪ, ಶ್ರೀನಿವಾಸ್ ಯಾದವ್, ಜಿ.ಮುನಿಯಪ್ಪ, ಜಿ. ಶ್ರೀನಿವಾಸ್, ರಾಮದಾಸ್, ಮಂಜುನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.