ಕೋಲಾರ

'ಸೌಲಭ್ಯಗಳ ಸದುಪಯೋಗವಾಗಲಿ'

Published On :

ಬಾಗೇಪಲ್ಲಿ: ಕೋಮುಲ್ ಒಕ್ಕೂಟದಿಂದ ಬರುವ ವಿವಿಧ ಸೌಲಭ್ಯಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋಮುಲ್ ನಿರ್ದೇಶಕ ವಿ. ಮಂಜುನಾಥರೆಡ್ಡಿ ಕರೆ ನೀಡಿದರು.
ತಾಲೂಕಿನ ದೇವರಗುಡಿಪಲ್ಲಿಯಲ್ಲಿ ಕೋಮುಲ್ ಮತ್ತು ಪಶುವೈದ್ಯ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾಲುಬಾಯಿ ಜ್ವರದಿಂದ ಮರಣ ಹೊಂದಿರುವ ಸೀಮೆ ಹಸುಗಳಿಗೆ ಪರಿಹಾರ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡಿ ಮಾತನಾಡಿದರು. ಪಶು ಇಲಾಖೆಯ ಸಹಾಯ ನಿರ್ದೇಶಕ ಡಾ. ವೆಂಕಟೇಶ್ ಮಾತನಾಡಿ, ತಾಲೂಕಿನ ಮಿಟ್ಟೇಮರಿ, ಹೊಸಹುಡ್ಯ ಮತ್ತು ಯಗವಬಂಡ್ಲಕರೆ ಗ್ರಾಮಗಳಲ್ಲಿ ಮೊದಲಿಗೆ ಕಾಲುಬಾಯಿ ಜ್ವರ ಕಾಣಿಸಿಕೊಂಡು ಸೀಮೆ ಹಸುಗಳು ಮರಣ ಹೊಂದಿದ್ದವು. ಈ ಕಾಲುಬಾಯಿ ಹರಡಿದ ಪ್ರಾರಂಭದಿಂದಲೇ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕೆಗಳನ್ನು ಹಾಕಿಸುವಂತೆ ತಿಳಿಸಿದರೂ ಬಹುತೇಕರು ಗಂಭೀರವಾಗಿ ಪರಿಗಣಿಸಲಿಲ್ಲ ಎಂದರು. ಕಾಲು ಬಾಯಿ ಜ್ವರದಿಂದ ಮೃತಪಟ್ಟಿರುವ 90 ಹಸು ಮತ್ತು ಕರುಗಳ 80 ಅರ್ಹ ಫಲಾನುಭವಿಗಳಿಗೆ ತಲಾ 25 ಸಾವಿರ ರು.ಗಳ ಚೆಕ್ ವಿತರಣೆ ಮಾಡಲಾಯಿತು. ಬಿ. ಸಾವಿತ್ರಮ್ಮ, ತಾಪಂ ಅಧ್ಯಕ್ಷೆ ಮುನಿರತ್ನಮ್ಮ, ಕೋಮಲ್ ನಿರ್ದೇಶಕಿ ಶೋಭಾ, ವೀರಭದ್ರ ರೆಡ್ಡಿ, ಪದ್ಮ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.