ಕೋಲಾರ

ಅಧಿಕಾರಿಗಳ ಗೈರಿನ ನಡುವೆ ಏಡ್ಸ್ ದಿನಾಚರಣೆ

Published On :

ಚಿಕ್ಕಬಳ್ಳಾಪುರ; ಜಿಲ್ಲಾ ಕೇಂದ್ರದಲ್ಲಿ ಬಹುತೇಕ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗೈರು ಹಾಜರಿಯ ನಡುವೆ ವಿಶ್ವ ಏಡ್ಸ್ ದಿನಾಚರಣೆ ಭಾನುವಾರ ನಡೆಯಿತು.
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,  ವಕೀಲರ ಸಂಘ, ಸ್ಥಳೀಯ ಸ್ವಯಂ ಸೇವಾ ಸಂಘಗಳು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಲಯನ್ಸ್ ಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಜಾಥಾದಿಂದ ಪ್ರಾರಂಭವಾಯಿತು. ಜಿಪಂ ಅಧ್ಯಕ್ಷ ಚಿನ್ನಪ್ಪ ಜಾಥಾಗೆ ಚಾಲನೆ ನೀಡಿದರು. ನಂತರ ಆಸ್ಪತ್ರೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ಮೂಲಕ ಸಂಚರಿಸಿದ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ, ಸ್ವಯಂ ಸೇವಾ ಸಂಸ್ಥೆಗಳ ಮುಖಂಡರು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿಯ ಆವರಣದಲ್ಲಿರುವ ಡಾ.ಎ.ಪಿ.ಜೆ. ಕಲಾಂ ಸಭಾಂಗಣಕ್ಕೆ ಆಗಮಿಸಿದರು.
ಏಡ್ಸ್ ವಿರುದ್ಧ ಜಾಗೃತಿ; ಮಾರಕ ಕಾಯಿಲೆ ಏಡ್ಸ್ ನಿಯಂತ್ರಣಕ್ಕಾಗಿ ಜನರಲ್ಲಿ ಹೆಚ್ಚಿಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕೆಂದು ನ್ಯಾಯಾಧೀಶ ಕೆ. ಅಮರನಾರಾಯಣ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಂಜಾಗ್ರತೆಯಿಲ್ಲದೇ ಮಾಡುವ ಸಣ್ಣ ಸಣ್ಣ ತಪ್ಪುಗಳಿಂದ ಮಾರಕ ಕಾಯಿಲೆಗಳಿಗೆ ಗುರಿಯಾಗಿ ತೊಂದರೆ ಅನುಭವಿಸುವಂತಹುದು ಹೆಚ್ಚಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಸರ್ಕಾರದ ಜತೆಗೆ ಜನರು ಸಹಕರಿಸಬೇಕೆಂದರು. ಏಡ್ಸ್ ಕಾಯಿಲೆಗೆ ಗುರಿಯಾದವರನ್ನು ಕೀಳು ಭಾವನೆಯಿಂದ ನೋಡಬಾರದು. ಅವರು ಸಾಮಾನ್ಯರಂತೆ ಜೀವನ ನಡೆಸಲು ಅವಕಾಶ ಮಾಡಿಕೊಡಬೇಕೆಂದು ಕರೆ ನೀಡಿದರು. ಜಿಲ್ಲಾ ಮತ್ತು ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ರಂಗಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿನ ನಿಯಂತ್ರಣಕ್ಕಾಗಿ ಸ್ವಯಂ ಸೇವಾ ಸಂಸ್ಥೆಗಳ ಜತೆಗೂಢಿ ದಿಟ್ಟ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೋಂಕಿತರ ನೋವಿಗೆ ಸ್ಪಂದಿಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ರಾಜೇಶ್ವರಿ ಹೆಗಡೆ, ನಳಿನಿ, ಏಡ್ಸ್ ನಿಯಂತ್ರಣಾಧಿಕಾರಿ ಡಾ. ಬಾಬುರೆಡ್ಡಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ನಾರಾಯಣಚಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ವಿ. ಸುನೀಲ್ ಇದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.