ಮೂಲ ಸೌಲಭ್ಯಗಳಿಗೆ ಆಗ್ರಹಿಸಿ ನಾಳೆ ರಸ್ತೆ ತಡೆ
ಕೋಲಾರ: ಮೂಲ ಸೌಕರ್ಯಗಳಿಗೆ ಒತ್ತಾಯಿಸಿ ಕೋಲಾರ ನಗರಸಭೆ ವ್ಯಾಪ್ತಿಗೆ ಸೇರಿದ ಜಯನಗರ, ಹಾರೋಹಳ್ಳಿ ಮತ್ತಿತರ ಬಡಾವಣೆಗಳ ನಿವಾಸಿಗಳು ಡಿ.3 ರಂದು ಮಂಗಳವಾರ ಬೆಳಗ್ಗೆ 10.30ಕ್ಕೆ ನಗರದ ಟೇಕಲ್ ರಸ್ತೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭಾ ಸದಸ್ಯ ಎಸ್.ಆರ್. ಮುರಳಿಗೌಡ ತಿಳಿಸಿದ್ದಾರೆ.
ಟೇಕಲ್ ಮುಖ್ಯ ರಸ್ತೆಯಲ್ಲಿ ಹಾದು ಹೋಗುವ ರೇಲ್ವೆ ಮಾರ್ಗಕ್ಕೆ ಮೇಲ್ಸೇತುವೆ ಅಥವಾ ಅಂಡರ್ ಪಾಸ್ ನಿರ್ಮಿಸಬೇಕು, ಮಂದಗತಿಯಲ್ಲಿ ಸಾಗಿರುವ ಕೋಲಾರ-ಟೇಕಲ್ ಮುಖ್ಯ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಟೇಕಲ್ ರಸ್ತೆ ಅಭಿವೃದ್ದಿ ಕಾಮಗಾರಿ ಮುಗಿಯುವವರೆಗೂ ಭಾರಿ ವಾಹನ ಸಂಚಾರ ನಿಷೇಧಿಸಬೇಕು, ಈ ಬಡಾವಣೆಗಳಲ್ಲಿ ಕೂಡಲೇ ನಗರೋತ್ಥಾನ-2 ರಡಿ ಕೆಲಸಗಳನ್ನು ಪ್ರಾರಂಭಿಸಬೇಕು, ಗೋಕುಲ್ ಕಾಲೇಜು ರಸ್ತೆ ಉಳಿಕೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು, ರಾಷ್ಟ್ರೀಯ ಹೆದ್ದಾರಿಯ ಎರಡು ಬದಿ ಮಳೆ ನೀರು ಹರಿಯಲು ಚರಂಡಿ ನಿರ್ಮಿಸಬೇಕೆಂಬುದು ಅವರು ಒತ್ತಾಯಿಸಿದ್ದಾರೆ.
ಉಪಕಸುಬುಗಳತ್ತ ಗಮನ ಹರಿಸಲಿ
ಚಿಂತಾಮಣಿ: ರೈತರು ಬೆಳೆಗಳ ಜೊತೆಗೆ ಉಪಕಸುಬುಗಳತ್ತ ಗಮನ ಹರಿಸಿದಲ್ಲಿ ಅಭಿವೃದ್ಧಿ ಸಾಧ್ಯ ಎಂದು ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಾರುಕಟ್ಟೆ ಮಾಹಿತಿ ಸಪ್ತಾಹದಲ್ಲಿ ಮಾತನಾಡಿ, ಅಂತರ್ಜಲ ಮಟ್ಟ ಕುಸಿತದಿಂದ ರೈತರು ಸಮರ್ಪಕವಾದ ನೀರು ದೊರೆಯದೆ ಸಂಕಷ್ಟ ಎದದುರಿಸುತ್ತಿದ್ದಾರೆ ಎಂದರು. ಕೃಷಿ ಸಂಶೋಧಕ ಅಧ್ಯಾಪಕ ಕೆ.ಎಂ. ರಾಜಣ್ಣ ಮಾತನಾಡಿ, ಟೊಮೋಟೋ ಬೆಳೆಯುವ ಪ್ರಾಥಮಿಕ ಹಂತದಲ್ಲಿ ರೋಗಗಳನ್ನು ನಿರೋಧಿಸಿದರೆ ಮುಂದೆ ಬರುವ ರೋಗಗಳನ್ನು ತಡೆಗಟ್ಟಬಹುದೆಂದು ವಿವರಿಸಿದರು. ಪ್ರಾಸ್ತಾವಿಕವಾಗಿ ನಾಗರಾಜ್ ಮಾತನಾಡಿದರು. ಸಂಶೋಧಕ ಎಂ.ಆರ್. ಆನಂದ್ ರಾಗಿ ಬೆಳೆಯುವ ವಿಧಾನಗಳ ಬಗ್ಗೆ ತಿಳುವಳಿಕೆ ನೀಡಿದರು. ಮುನಿರೆಡ್ಡಿ, ರತ್ನಮ್ಮ, ಗೋಪಾಲಕೃಷ್ಣ, ರವಿ ಇದ್ದರು.
ಜಮೀನು ವಿವಾದ; ರಕ್ಷಣೆಗೆ ಮನವಿ
ಚಿಂತಾಮಣಿ: ಜಮೀನು ವಿವಾದ ಹಿನ್ನೆಲೆಯಲ್ಲಿ ಗುಂಪು ಕಟ್ಟಿಕೊಂಡು ಪ್ರಾಣ ಬೆದರಿಕೆ ಹಾಕುತ್ತಿದ್ದು, ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಮುನಗನಹಳ್ಳಿ ಗ್ರಾಮದ ನಾಗೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗ್ರಾಮದ ವೀರಪ್ಪ, ಗೋಪಾಲಪ್ಪ ಎಂಬವರು ಅಕ್ರಮ ದಾಖಲೆ ಸೃಷ್ಟಿಸಿ ಅಧಿಕಾರಿಗಳೊಂದಿಗೆ ಶಾಮೀಲಾಗಿ ಸುಳ್ಳು ಖಾತೆ ಮಾಡಿಸಿದ್ದಾರೆಂದು ನಾಗೇಶ್ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

