ಕೋಲಾರ

ದೇಗುಲದಲ್ಲಿ ವಿಶೇಷ ಅಲಂಕಾರ

Published On :

ಮಾಲೂರು: ಕಾರ್ತಿಕ ಮಾಸದ ಕೊನೆಯ ಸೋಮವಾರದ ಅಂಗವಾಗಿ ತಾಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೊಜೆ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಮುಜರಾಯಿ ಇಲಾಖೆಯ ಶ್ರೀ ಶಂಕರನಾರಾಯಣಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ರುದ್ರಾಭಿಷೇಕ, ಹೂವಿನ ಅಲಂಕಾರ ನಡೆಯಿತು. ಸಂಜೆ ಸ್ವಾಮಿಯನ್ನು ಅನ್ನದ ಮಂಟಪದ ಅಲಂಕಾರದಲ್ಲಿ ಶೃಂಗರಿಸಲಾಗಿತ್ತು. ಪಟ್ಟಣದ ಮಹಿಳೆಯರು ತಮ್ಮ ಮನೆಗಳಿಂದ ತಂಬಿಟ್ಟಿನ ದೀಪಗಳನ್ನು ಬೆಳಗಿಸಿದರು. ಶಿವಾರ ಪಟ್ಟಣದ ಸೋಮೇಶ್ವರ ಸೇರಿದಂತೆ ಪಟ್ಟಣದ ಮಾರಿಕಾಂಭ,ಪಟಾಲಮ್ಮ, ಸಪಲಮ್ಮ, ಬಸವೇಶ್ವರ, ಪಂಚಾಲಿಂಗ ದೇವಾಲಯಗಳಲ್ಲಿ ಕಾರ್ತಿಕ ಸೋಮವಾರದ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು.



ನಿವೃತ್ತ ಶಿಕ್ಷಕರಿಗೆ ಸನ್ಮಾನ
ಗೌರಿಬಿದನೂರು: ಪಟ್ಟಣದ ನೆಹರೂಜಿ ಕಾಲೋನಿ ಶ್ರೀದಂಡಿಮರಿಗಮ್ಮ ಯುವಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವದಲ್ಲಿ ಬಾಲ ವಿದ್ಯಾ ಭವನ ಶಾಲೆಯ ನಿವೃತ್ತ ಶಿಕ್ಷಕ ಎಂ. ಜಗದೀಶ್ ಅವರಿಗೆ ವಿದ್ಯಾರ್ಥಿಗಳಿಂದ ಸನ್ಮಾನ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಾದ ಶ್ರೀನಾಥ್, ಹರಿಕೃಷ್ಣ, ನವೀನ್, ರಂಜೀತ್, ಶಂಕರ, ಕೃಷ್ಣಮೂರ್ತಿ, ನಾಗರಾಜು ಇದ್ದರು.
ವಿಶೇಷ ಪೂಜೆಗಳು
ಬಾಗೇಪಲ್ಲಿ: ಕಾರ್ತಿಕ ಮಾಸದ ಕೊನೆಯ ಸೋಮವಾರದ ಪ್ರಯುಕ್ತ ಪಟ್ಟಣದ ವಿವಿಧ ದೇವಾಲಯಗಳಲ್ಲಿ ಹೋಮ, ರುದ್ರಾಭಿಷೇಕ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿತ್ತು. ಚೋಳ ರಾಜರ ಕಾಲದಲ್ಲಿ ನಿರ್ಮಾಣಗೊಂಡಿರುವ ತಾಲೂಕಿನ ಪರಗೋಡು ಪಂಚಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಚಿತ್ರಾವತಿ ನದಿ ದಡದಲ್ಲಿ ನೆಲೆಸಿರುವ ಶ್ರೀ ಜಡಲ ಭೈರವೇಶ್ವರ ದೇವಾಲಯಗಳಲ್ಲಿ ಭಕ್ತರು ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.