ನೂತನ ದಂಪತಿ ಆತ್ಮಹತ್ಯೆ
ಶಿಡ್ಲಘಟ್ಟ: ಕಳೆದ ಐದು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಜರಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಣ್ಣ(24) ಮತ್ತು ಸುಮಾ(20) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ದಂಪತಿಗಳಾಗಿದ್ದಾರೆ. ಇವರು ಪೋಷಕರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಇತ್ತೀಚೆಗೆ ಸುಮಾ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಆತ್ಮಹತ್ಯೆಗೆ ಇದೇ ಕಾರಣ ಎನ್ನಲಾಗಿದೆ. ಜರಗನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಮೃತ ದೇಹಗಳು ಬಿದ್ದಿರುವುದನ್ನು ಕಂಡ ಗ್ರಾಮಸ್ಥರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ದಿಬ್ಬೂರುಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಾರ್ಟ್ ಸರ್ಕ್ಯೂಟ್; ಮನೆ ಭಸ್ಮ
ಬಂಗಾರಪೇಟೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಯೊಂದು ಸುಟ್ಟು ಸುಮಾರು ಎರಡು ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಟಿಪ್ಪುನಗರದ ಐಬಿಎಂ ಶಾಲೆ ಹಿಂಬಾಗದಲ್ಲಿರುವ ಡೈರಿ ಶ್ರೀನಿವಾಸ್ ಎಂಬವರ ಮನೆ ಬೆಂಕಿಗೆ ತುತ್ತಾಗಿದ್ದು, ಬೆಂಕಿ ಕಾಣಿಸಿಕೊಂಡ ಕೂಡಲೆ ಅಕ್ಕಪಕ್ಕದ ನಿವಾಸಿಗರು ಬೆಂಕಿ ನಂದಿಸಲು ಮುಂದಾದರೂ ಫಲಕಾರಿಯಾಗಿಲ್ಲ. ನಂತರ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸಿದರಾದರೂ ಆ ವೇಳೆಗಗಾಲೇ ಮನೆ ಸಂಪೂರ್ಣ ಸುಟ್ಟುಕರಗಲಾಗಿತ್ತು. ಪಿಎಸ್ಐ ಯೋಗಾನಂದ ಸೋನಾರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

