ಕೋಲಾರ

5 ರಂದು ಮಕ್ಕಳ ಸಾಹಿತ್ಯ ಸಮ್ಮೇಳನ

Published On :

ಕೆಜಿಎಫ್: ಪ್ರಥಮ ಭಾರಿಗೆ ಕನ್ನಡ ಸಾಹಿತ್ಯ ಪರಿಷತ್‌ನಿಂದ ಗಡಿನಾಡು ಚಿನ್ನದ ಗಣಿ ಪ್ರದೇಶದಲ್ಲಿ  ಜಿಲ್ಲಾಮಟ್ಟದ ವಿಶೇಷ ಮಕ್ಕಳ ಸಾಹಿತ್ಯ ಸಮ್ಮೇಳನ ಮುಂಬರುವ ತಿಂಗಳು ಡಿ.5 ರಂದು ಕೆಜಿಎಫ್‌ನ ಕನ್ನಡ ಸಂಘದ ಆವರಣದಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಜೆ.ಜಿ. ನಾಗರಾಜ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೆಜಿಎಫ್ ಕ್ಷೇತ್ರ ತಿಮಿಳುನಾಡು ಮತ್ತು ಆಂಧ್ರಪ್ರದೇಶದ ಗಡಿಭಾಗದಲ್ಲಿದ್ದು ಇಲ್ಲಿ ಕನ್ನಡದ ಕಂಪನ್ನು ಹಬ್ಬಿಸಲು ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದ್ದು ಇದಕ್ಕೆ ಎಲ್ಲಾ ಕನ್ನಡಪರ ಸಂಘಟನೆಗಳು ಸಹಕಾರ ನೀಡಬೇಕೆಂದು ತಿಳಿಸಿದರು.
ಕನ್ನಡ ಸಂಘದಲ್ಲಿ ಡಿ.5 ರಂದು ಬಳಗ್ಗೆ 9 ರಿಂದ ಸಂಜೆ 4.45ರ ವರೆಗೆ ನಡೆಯಲಿರುವ ಮಕ್ಕಳ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಶಾಲಾ ಮಕ್ಕಳಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನಗಳೊಂದಿಗೆ ಪ್ರಮಾಣಪತ್ರ ವಿತರಿಸಿ, ಮೂವರು ಮಕ್ಕಳ ಸಾಹಿತಿಗಳಿಗೆ ವೇದಿಕೆಯಲ್ಲಿ ಗೌರವ ಸೂಚಿಲಲಾಗುವುದು  ಎಂದು ತಿಳಿಸಿದರು.
ಜಿಲ್ಲಾಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಪುಂಡಲಿಕಹಾಲಂಬಿ, ರಾಮನಗರ ಜಿಲ್ಲಾಧಿಕಾರಿ ಡಾ. ವಿಶ್ವನಾಥ್, ಕೋಲಾರ ಜಿಲ್ಲಾಧಿಕಾರಿ ಟಿ.ಕೆ. ರವಿ, ಸಾಹಿತಿಗಳಾದ ಸತ್ಯನಾರಾಯಣ, ವಿಧಾನಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ, ಕೆಜಿಎಫ್ ಶಾಸಕ ವೈ. ರಾಮಕ್ಕ ಮತ್ತಿತರರು ಭಾಗವಹಿಸಲಿದ್ದು, ಇದೇ ವೆಳೆ ಜಿಲ್ಲಾಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ನೂತನ ಲಾಂಚನವನ್ನು ಬಿಡುಗಡೆಗೊಳಿಸಿದರು.
ವೀರವೆಂಕಟಪ್ಪ, ದೇಶಪಾಂಡೆ, ಪ್ರೊ.ನರಸಿಂಹೇಗೌಡ ನಾರಾಯಣಪುರ್, ಅಶ್ವತ್, ಎಚ್.ಕೆ. ಪುರುಷೋತ್ತಮ, ಮಂಜುನಾಥ ಹೆಗಡೆ, ಚಂದ್ರಪ್ರಕಾಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.