ಕೆಳ ಸೇತುವೆ ನಿರ್ಮಿಸಲು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಕೋಲಾರ, ಡಿ.2
ನಗರದ ಶ್ರೀ ವೇಣುಗೋಪಾಲಸ್ವಾಮಿ ಕಲ್ಯಾಣಿಯ ಬಳಿ ಇರುವ ರೇಲ್ವೆ ಗೇಟ್ ಬಳಿ ಕೆಳ ಸೇತುವೆ ನಿರ್ಮಿಸಲು ಒತ್ತಾಯಿಸಿ ಬಿಜೆಪಿಯಿಂದ ಸೋಮವಾರ ರಸ್ತೆ ತಡೆಮಾಡಿ ಪ್ರತಿಭಟಿಸಲಾಯಿತು.
ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಓಂಶಕ್ತಿ ಚಲಪತಿ, ಜಿಲ್ಲಾಧ್ಯಕ್ಷ ಪ್ರಮೋದ್, ನಗರ ಘಟಕದ ಅಧ್ಯಕ್ಷ ಜಯಂತಿಲಾಲ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಗೇರಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ರೇಲ್ವೆ ಗೇಟ್ ಬಳಿ ಜಮಾಯಿಸಿ ಕೋಲಾರ-ಟೇಕಲ್ ರಸ್ತೆಯಲ್ಲಿ ಪ್ರತಿದಿನ ನೂರರು ವಾಹನಗಳು ಓಡಾಡುತ್ತವೆ. ಕೋಲಾರ-ಚಿಕ್ಕಬಳ್ಳಾಪುರ ರೈಲು ಸಂಚಾರ ಆರಂಭವಾದ ಮೇಲೆ ಸಂಚಾರ ದಟ್ಟಣೆ ಹೆಚ್ಚಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದ್ದು ಜನತೆಯ ಅನುಕೂಲಕ್ಕಾಗಿ ಕೆಳ ಸೇತುವೆ ನಿರ್ಮಾಣಕ್ಕೆ ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ ಪ್ರಯತ್ನಿಸಬೇಕೆಂದು ಒತ್ತಾಯಿಸಿದರು.
ಸಚಿವ ಮುನಿಯಪ್ಪನವರು ಓಟ್ಬ್ಯಾಂಕ್ ರಾಜಕಾರಣಕ್ಕಾಗಿ ರೈಲು ಸಂಚಾರ ಆರಂಭಿಸಿದ್ದಾರೆ. ಆದರೆ, ಜನತೆಯ ಸಮಸ್ಯೆ ಅರಿತಿಲ್ಲ, ಕೋಲಾರ-ಟೇಕಲ್ ರಸ್ತೆಯಲ್ಲಿ ರೈಲುಗಳು ಓಡಾಟ ಸಮಯದಲ್ಲಿ ಗೇಟ್ ಹಾಕುವುದರಿಂದ ಸಂಚಾರ ವ್ಯವಸ್ಥೆ ಹದೆಗೆಡುವುದರಿಂದ ಅಂಡರ್ಪಾಸ್ ನಿರ್ಮಿಸಿ ನಂತರ ರೈಲು ಸಂಚಾರ ಆರಂಭಿಸಬೇಕಾಗಿತ್ತು ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಓಂಶಕ್ತಿ ಚಲಪತಿ ಸಚಿವರ ವಿರುದ್ಧ ಕಿಡಿಕಾರಿದರು.
ಅನೇಕ ಕಡೆ ಅವೈಜ್ಞಾನಿಕವಾಗಿ ಅಂಡರ್ಪಾಸ್ ನಿರ್ಮಿಸಿ ಸಾರ್ವಜನಿಕರ ಹಣ ಪೋಲು ಮಾಡಲಾಗಿದೆ.
ಆದರೆ, ಕೋಲಾರ-ಟೇಕಲ್ ರಸ್ತೆಯಲ್ಲಿ ಅಂಡರ್ಪಾಸ್ ಅತ್ಯವಶ್ಯಕವಾಗಿದ್ದರೂ ಗಮನ ನೀಡಿಲ್ಲ, ಇದರಿಂದ ವಿದ್ಯಾರ್ಥಿಗಳಿಗೆ, ಸರ್ಕಾರಿ ನೌಕರರಿಗೆ, ಕೂಲಿ ಕಾರ್ಮಿಕರಿಗೆ ಓಡಾಡಲು ಸಮಸ್ಯೆ ಆಗುತ್ತಿದೆ ಎಂದು ದೂರಿದರು.
ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ ಕೂಡಲೇ ರೇಲ್ವೆ ಅಧಿಕಾರಿಗಳ ಜೊತೆ ಮಾತನಾಡಿ ಕೆಳ ಸೇತುವೆ ನಿರ್ಮಾಣಕ್ಕೆ ಮನವೊಲಿಸಬೇಕು. ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆಯವರಿಗೆ ಜನತೆಯ ಸಮಸ್ಯೆ ವಿವರಿಸಿ ಕೆಳ ಸೇತುವೆಗೆ ಮಂಜೂರಾತಿ ಪಡೆಯುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿಯ ಇನ್ನಿತರ ಮುಖಂಡರಾದ ಶಿಳ್ಳಂಗೆರೆ ಮಹೇಶ್, ಮು.ರಾಘವೇಂದ್ರ, ತಿಮ್ಮರಾಯಪ್ಪ, ಶ್ರೀನಾಥ್, ಸಾ.ಮ. ಬಾಬು, ಹಾರೋಹಳ್ಳಿ ನಾರಾಯಣಸ್ವಾಮಿ, ಮಹೇಶ್ರಾವ್ ಕದಂ, ನರೇಶ್, ಮುಕುಂದ, ನಾಮಲ ಮಂಜು, ಮುದುವತ್ತಿ ಮಂಜುನಾಥ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

