ಕೋಲಾರ

'ಗ್ರಾಮ ಗ್ರಾಮಗಳಲೂ ಕನ್ನಡ ಪಸರಿಸಲಿ'

Published On :

ಚಿಕ್ಕಬಳ್ಳಾಪುರ: ಕನ್ನಡ ರಾಜ್ಯೋತ್ಸವವನ್ನು ಗ್ರಾಮ ಗ್ರಾಮಗಳಲ್ಲೂ ಸಡಗರ ಸಂಭ್ರಮದಿಂದ ಆಚರಿಸುವ ಮೂಲಕ ನಾಡು ನುಡಿಯ ಬಗ್ಗೆ ಅಭಿಮಾನ ಬೆಳೆಸಲು ಮುಂದಾಗಬೇಕೆಂದು ತಾಪಂ ಅಧ್ಯಕ್ಷ ಕೃಷ್ಣಮೂರ್ತಿ ಸಲಹೆ ನೀಡಿದರು.
ತಾಲೂಕಿನ ಅಂಗರೇಖನಹಳ್ಳಿಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಡಾ.ರಾಜ್ ಕುಮಾರ್ ಕನ್ನಡ ಯುವಕರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವೈ.ಎಲ್. ಹನುಮಂತರಾವ್, ಉಪನ್ಯಾಸಕ ಹಾಲಪ್ಪ, ಸಾಹಿತಿ  ಬಿ.ಆರ್. ವರದರಾಜು ಮಾತನಾಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಟೋ ಚಾಲಕರಿಗೆ ಸಮವಸ್ತ್ರ ಮತ್ತು ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಲಕ್ಷ್ಮಮ್ಮ, ಪ್ರೇಮಲೀಲಾ ವೆಂಕಟೇಶ್, ಕೆ.ಪಿ. ನವಮೋಹನ್, ಎಂ. ಕೃಷ್ಣಪ್ಪ, ನಳಿನಾಕ್ಷಿ, ಬಿ.ಆರ್. ಮಂಜುಳಾ, ಪೃಥ್ವಿರಾಜ್, ಸದಸ್ಯರಾದ ಚನ್ನಕೇಶವಮೂರ್ತಿ, ಇ. ಮುನಿಕೃಷ್ಣ, ಎ.ಟಿ. ರಾಮಕೃಷ್ಣೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.