ಕೋಲಾರ

ವಿಕಲಚೇತನರಿಗೆ ಹೊಸ ಯೋಜನೆಗಳು ಜಾರಿ

Published On :

ಕೋಲಾರ: ವಿಕಲಚೇತನರ ಕಲ್ಯಾಣಕ್ಕಾಗಿ ಈಗಾಗಲೇ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ರಾಜ್ಯ ಸರ್ಕಾರ 2013-14ನೇ ಸಾಲಿನಲ್ಲಿ ಹೊಸದಾಗಿ ಮೂರು ಯೋಜನೆಗಳನ್ನು ಜಾರಿಗೆ ತಂದಿದೆ.
10ನೇ ತರಗತಿಯ ನಂತರದ ವಿದ್ಯಾಭ್ಯಾಸ ಪಡೆಯುತ್ತಿರುವ ಎಲ್ಲಾ ವಿಕಲಚೇತನರ ವಿದ್ಯಾರ್ಥಿಗಳಿಗೆ ಅವರು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಿಗೆ ಸರ್ಕಾರದ ಮಾರ್ಗಸೂಚಿಯಂತೆ ಪಾವತಿಸಿರುವ ಶುಲ್ಕವನ್ನು ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಹಿಂತಿರಿಗಿಸುವ ಯೋಜನೆ ಜಾರಿಗೆ ತರಲಾಗಿದೆ.
ಕಾಲೇಜಿಗೆ ಪಾವತಿಸಿರುವ ಶುಲ್ಕಕ್ಕೆ ಸಂಬಂಧಿಸಿದ ರಸೀದಿಯ ಅಸಲಿ ಪ್ರತಿಯನ್ನು ಅರ್ಜಿಯೊಂದಿಗೆ ಆಯಾ ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆಯ ಅಧಿಕಾರಿಗಳಿಗೆ ನೀಡಿದಲ್ಲಿ ದಾಖಲೆ ಪರಿಶೀಲಿಸಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತದೆ.
ಎರಡನೇಯದಾಗಿ ವಿಕಲಚೇತನ ಯುವಕ, ಯುವತಿಯರನ್ನು ವಿವಾಹವಾಗುವ ಸಾಮಾನ್ಯ ಯುವಕ, ಯುವತಿಯರಿಗೆ ನಿತಂತರವಾಗಿ ಮಾಸಿಕ ಆದಾಯ ದೊರಕಿಸಲು ವಿಕಲಚೇತನರ ವ್ಯಕ್ತಿಯ ಹೆಸರಿನಲ್ಲಿ 50 ಸಾವಿರ ರು.ಗಳನ್ನು ಹೂಡಿಕೆಯ ರೂಪದಲ್ಲಿ ನೀಡಲಾಗುವುದು.
ಈ ಹಣವನ್ನು ಕನಿಷ್ಠ 5 ವರ್ಷಗಳ ಕಾಲ ಬ್ಯಾಂಕಿನಿಂದ ವಾಪಸ್ ಪಡೆಯುವಂತಿಲ್ಲ. ಹೂಡಿಕೆ ಹಣದಿಂದ ಬರುವ ಬಡ್ಡಿ ಹಣವನ್ನು ಭತ್ಯೆಯಾಗಿ ವಿಕಲಚೇತನರನ್ನು ಮದುವೆಯಾದ ಸಾಮಾನ್ಯ ವ್ಯಕ್ತಿ ಪಡೆಯಬಹುದಾಗಿದೆ. ಅಂಧ ಮಹಿಳೆಗೆ ಜನಿಸುವ ಮಕ್ಕಳಿಗೆ ಆರೋಗ್ಯ ಹಾಗೂ ಪೌಷ್ಠಿಕ ಆಹಾರ ನೀಡುವ ದೃಷ್ಟಿಯಿಂದ ತಿಂಗಳಿಗೆ 2 ಸಾವಿರ ರು.ಗಳಂತೆ 2 ವರ್ಷದ ಅವಧಿಗೆ ಶಿಶುಪಾಲನಾ ಭತ್ಯೆ ನೀಡವಾಗುತ್ತದೆ. ಈ ಯೋಜನೆಯಡಿ ಅಂಧ ಮಹಿಳೆಗೆ ಎರಡು ಮಕ್ಕಳಿಗೆ ತಾಯಿಯಾಗುವುದಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಈಗಾಗಲೇ ಮೂರು ಯೋಜನೆಗಳು ಜಾರಿಗೆ ಬಂದಿದ್ದರೂ ಕೋಲಾರ ಜಿಲ್ಲೆ ಸೇರಿದಂತೆ ಅನೇಕ ಕಡೆ ಪ್ರಚಾರದ ಕೊರತೆಯಿಂದ ಫಲಾನುಭವಿಗಳು ಸಿಗದಂತಾಗಿದ್ದು ವಿಶ್ವ ವಿಕಲಚೇತನ ದಿನಾಚರಣೆಯ ಸಂದರ್ಭದಲ್ಲಾದರೂ ವಿಕಲಚೇತನರಲ್ಲಿ ಅರಿವು ಮೂಡಿಸಿ ಸರ್ಕಾರದ ಯೋಜನೆ ಯಶಸ್ವಿಯಾಗಿಸುವ ಹೊಣೆಗಾರಿಕೆ ಸಂಬಂಧಪಟ್ಟ ಅಧಿಕಾರಿಗಳದ್ದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.