ಕೋಲಾರ

ಶ್ರೀ ರಾಮಲಿಂಗೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ

Published On :

ಗೌರಿಬಿದನೂರು: ತಾಲೂಕಿನ ಹಿರೇಬಿದನೂರು ಗ್ರಾಮದ ಪ್ರಾಚೀನ ದೇವಾಲಯ ಶ್ರೀ ರಾಮಲಿಂಗೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಸಂಜೆ  ವಿಜೃಂಭಣೆಯಿಂದ ಪ್ರಮುಖ ಬೀದಿಗಳಲ್ಲಿ ಸ್ವಾಮಿಯ ಮೆರವಣಿಗೆ ವಿವಿಧ ಕಲಾ ತಂಡಗಳೊಂದಿಗೆ ನಡೆಯಲಿದೆ ಎಂದು ಸಮಿತಿ ತಿಳಿಸಿದೆ. ಜಿಪಂ ಮಾಜಿ ಅಧ್ಯಕ್ಷ ಸಿ.ಆರ್. ನರಸಿಂಹಮೂರ್ತಿ, ಸೂರ್ಯನಾರಾಯಣಶೆಟ್ಟಿ, ಕೃಷ್ಣಪ್ಪ, ರಮಣರೆಡ್ಡಿ ಇದ್ದರು.


ವೈಭವದ ಕಾರ್ತಿಕ ಆಚರಣೆ
ಮುಳಬಾಗಲು: ಪಟ್ಟಣದಲ್ಲಿ ಸೋಮವಾರ ಕೊನೆಯ ಕಾರ್ತಿಕ ವಾದ ಕಾರಣ ಶಿವಾಲಯಗಳಿಗೆ ಭಕ್ತಾಧಿಗಳು ಹೆಚ್ಚಿಗೆ ಆಗಮಿಸಿ ದೇವರ ದರ್ಶನ ಪಡೆದರು. ಪಟ್ಟಣದ ಶಿವಕೇಶವನಗರದ ಉದ್ಭವ ಶಿವದೇವಾಲಯ, ಸೋಮೇಶ್ವರಪಾಳ್ಯದ ಸೋಮೇಶ್ವರಸ್ವಾಮಿ ದೇವಾಲಯ, ಗಣೇಶಪಾಳ್ಯದ ಶಂಕರಮಠ ಮತ್ತು ಪಟ್ಟಣದ ಆಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿರುವ ಕಲ್ಯಾಣ ಸುಬ್ರಮಣ್ಯ ಸ್ವಾಮಿ ದೇವರಿಗೆ ವಿಶೇಷ ಪೂಜೆಗಳು ನಡೆದವು. ಇದರೊಂದಿಗೆ ಅನ್ನದಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಮಹಿಳೆಯರು ತುಪ್ಪದ ದೀಪಗಳನ್ನು ದೇವಾಲಯಗಳ ಮುಂದೆ ಬೆಳಗಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.