ಕೋಲಾರ

ಪಿಎಸ್ಐ ನರಸಿಂಹಮೂರ್ತಿ ಈಗ ಠಾಣಾಧಿಕಾರಿ

Published On :

ಕೆಜಿಎಫ್:  ಕೇಂದ್ರ ವಲಯ ಐಜಿಪಿ ಅಮರ್ಕುಮಾರ್ ಪಾಂಡೆ ಅವರ ಆದೇಶದ ಮೇರೆಗೆ ಕೆಜಿಎಫ್ನ ರಾಬರ್ಟ್ಸನ್ಪೇಟೆ ಪೊಲೀಸ್ ಠಾಣಾಯಲ್ಲಿ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ನರಸಿಂಹಮೂರ್ತಿ ಅವರನ್ನು ಠಾಣಾ ಅಧಿಕಾರಿಯಾಗಿ ನೇಮಿಸಿ ಆಂತರಿಕ ಬದಲಾವಣೆ ಮಾಡಲಾಗಿದೆ ಎಂದು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಡಾ.ರೋಹಿಣಿಕಟೋಚ್ ಸೆಫಟ್ ಆದೇಶ ಹೊರಡಿಸಿದ್ದಾರೆ.   ಒಂದಕ್ಕಿಂತ ಹೆಚ್ಚು ಪಿಎಸ್ಐಗಳು ಒಂದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳ ಪೈಕಿ ಸೇವಾವಧಿಯಲ್ಲಿ ಹಿರಿಯ ಪಿಎಸ್ಐ ಅಧಿಕಾರಿಗೆ ಠಾಣಾ ಅಧಿಕಾರಿಯಾಗಿ ನೇಮಿಸಬೇಕು ಎಂದು ಉಚ್ಚನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದ್ದ ಹಿನ್ನಲೆಯಲ್ಲಿ ನ್ಯಾಯಾಲಯ ಈ ರೀತಿ ತೀರ್ಪು ನೀಡಿ 6 ತಿಂಗಳಾಗಿತ್ತು. ಆದರೆ ಇದನ್ನು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇದನ್ನು ಕಾರ್ಯರೂಪಕ್ಕೆ ತರದ ಕಾರಣ ವಿಧಾನಸಭಾ ಕಲಾಪದಲ್ಲಿ ಈ ಬಗ್ಗೆ ಪ್ರಶ್ನೆ ಮಂಡನೆ ಮಾಡಿರುವ ಹಿನ್ನಲೆಯಲ್ಲಿ ಈ ಮೊದಲೇ ಕೇಂದ್ರ ವಲಯ ಐಜಿಪಿ ಆದೇಶದ ಮೇರೆಗೆ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಇಲಾಖೆಯ ಮೂಲದಿಂದ ತಿಳಿದುಬಂದಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.