ಕೋಲಾರ

ಮಡೆಸ್ನಾನ ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ

Published On :

ಚಿಕ್ಕಬಳ್ಳಾಪುರ: ಮೂಢ ಪದ್ಧತಿಯಾದ ಮಡೆಸ್ನಾನ ಮತ್ತು ಪಂಕ್ತಿಭೋಜನ ವ್ಯವಸ್ಥೆ ಆಚರಣೆಯಲ್ಲಿರುವುದನ್ನು ಖಂಡಿಸುತ್ತಿರುವ ಸಿಪಿಐ(ಎಂ) ಪಕ್ಷ ನಗರದ ಸುಬ್ಬರಾಯನಪೇಟೆಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಮುಂಭಾಗದಲ್ಲಿ ನಡೆಯಲಿರುವ ಮಡೆಸ್ನಾನ ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾಗಿದೆ.
ಡಿ.8 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮಡೆಸ್ನಾನ ಮತ್ತು ಪಂಕ್ತಿಭೋಜನ ಆಚರಣೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದು ನಗರದ ಸುಬ್ಬರಾಯನಪೇಟೆಯ ಶ್ರೀ ಸುಬ್ರಮಣ್ಯಸ್ವಾಮಿ ದೇವಾಲಯದ ಮುಂಭಾಗ ಅಂದು ಪ್ರತಿಭಟನೆ ನಡೆಸಲಾಗುವುದು ಎಂದು ಸಿಪಿಐ(ಎಂ)ಜಿಲ್ಲಾ ಕಾರ್ಯದರ್ಶಿ ಎಂ.ಪಿ. ಮುನಿವೆಂಕಟಪ್ಪ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಾದಿ ಕಾಲದಿಂದಲೂ ಜನರಲ್ಲಿ ಮೂಡಿ ಬಂದಿರುವ ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಸಮಾಜದಲ್ಲಿ ಮೂಢನಂಬಿಕೆ, ಕಂದಾಚಾರದಂತಹ ಕೆಟ್ಟ ಆಚರಣೆಗಳನ್ನು ನಿರ್ಮೂಲನೆ ಮಾಡಬೇಕಿದೆ. ರಾಜ್ಯದ ಹಲವೆಡೆ ಇಂತಹ ಅನಿಷ್ಟ ಪದ್ಧತಿಗಳು ಆಚರಣೆಯಲ್ಲಿದ್ದು, ಉಡುಪಿಯಲ್ಲಿ ಪಂಕ್ತಿಬೇಧ, ಕುಕ್ಕೇ ಸುಭ್ರಮಣ್ಯ ಹಾಗೂ ಇತರೆಡೆ ಮಡೆಸ್ನಾನ ಪದ್ಧತಿಗಳು ಜೀವಂತವಾಗಿವೆ. ಈ ನಿಟ್ಟಿನಲ್ಲಿ ನಿಂರಂತರ ಹೋರಾಟ ನಡೆಸುತ್ತಿದ್ದೇವೆ. ಹಿಂದಿನ ಸರ್ಕಾರಕ್ಕೆ ಈ ಬಗ್ಗೆ ಹಲವು ಬಾರಿ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಪುರೋಹಿತಶಾಹಿಗಳು ಇವುಗಳನ್ನು ಪ್ರೇರೇಪಿಸುವ ಮೂಲಕ ಸಮಾಜದಲ್ಲಿ ಅಜ್ಞಾನದೆಡೆಗೆ ದೂಡುತ್ತಿದ್ದಾರೆ. ಇಂತಹ ಅನಾಗರೀಕ ಪದ್ಧತಿಗಳ ಬಗ್ಗೆ ತಲೆಕೆಡಿಸಿಕೊಳ್ಳದ ಹೊಸ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಚಕಾರವೆತ್ತುತ್ತಿಲ್ಲ. ಅಲ್ಲದೆ ಸಂಪುಟ ಸಚಿವರು ಇದನ್ನು ಬಳಸಿಕೊಂಡು ಮತಬ್ಯಾಂಕ್ ರಾಜಕೀಯ ಮಾಡಲು ಹೊರಟಿದ್ದಾರೆ. ಸರ್ಕಾರ ಈ ಅನಿಷ್ಟ ಪದ್ಧತಿಗಳನ್ನು ರದ್ದು ಪಡಿಸಬೇಕು ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ತಿಳಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.