ಕೋಲಾರ

ವಿಕಲಚೇತನರಿಗೆ ಪ್ರೋತ್ಸಾಹ ನೀಡಿ

Published On :

ಕೆಜಿಎಫ್: ವಿಕಲಚೇತನರು ಕೊರಗನ್ನು ಪಕ್ಕಕ್ಕಿಟ್ಟು ಎಲ್ಲರಂತೆ ಜೀವಿಸಲು ಮುಂದಾಗುತ್ತಿರುವ ನಿಟ್ಟಿನಲ್ಲಿ ಎಲ್ಲಾ ಜನಸಾಮಾನ್ಯರು ಅವರೊಂದಿಗೆ ಕೈಜೊಡಿಸಿ ಅವರ ಯಶಸ್ಸಿಗೆ ಪಣ ತೊಡಬೇಕಾಗಿದೆ ಎಂದು ಕೆಜಿಎಫ್ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಆರ್.ಪಿ. ನಂದೀಶ್ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಕೆಜಿಎಫ್ ವಲಯ ವತಿಯಿಂದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಆಯೋಜಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ವಿಕಲಚೇತನರು ತಮ್ಮಲ್ಲಿರುವ ಪ್ರತಿಭೆ ಹೊರತರಬೇಕು ಎಂದು ತಿಳಿಸಿದರು. ನ್ಯಾಯಾಧೀಶರಾದ ಬಸವರಾಜು ಮಾತನಾಡಿ, ವಿಕಲಚೇತನರು ಇತ್ತೀಚೆಗೆ ಜನಸಾಮಾನ್ಯರು ಮಾಡಲು ಸಾಧ್ಯವಾಗ ಸಾಧನೆಗಳನ್ನು ಮಾಡುತ್ತಿದ್ದಾರೆ ಎಂದರು. ಅಂಗವಿಕಲರಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರುಯೋಜನೆಗಳನ್ನು ಜಾರಿಗೊಳಿಸಿದೆ. ಪ್ರತಿಯೊಬ್ಬ ವಿಕಲಚೇತನರು ಇದರ ಸದುಪಯೋಗ ಪಡೆಯಲು ಮುಂದಾಗಬೇಕು ಎಂದು ತಿಳಿಸಿದರು.
ಈ ವೇಳೆ ಕೆಜಿಎಫ್ ಕ್ಷೇತ್ರದ ವಿವಿಧ ಕಡೆಗಳಿಂದ ಅಂಗವಿಕಲರು ಬಂದಿದ್ದು ಅವರ ಕುಂದುಕೊರತೆಗಳನ್ನು ವೇದಿಕೆಯ ಮೇಲಿದ್ದ ಮುಖಂಡರಲ್ಲಿ ತಿಳಿಸಿದರು. ಈ ವೇಳೆ ವಿಕಲಚೇತನ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಕೆಜಿಎಫ್ ಸಿವಿಲ್ ನ್ಯಾಯಾಲಯದ ಸರ್ಕಾರಿ ವಕೀಲಜಗದೀಶ್ಕುಮಾರ್,  ಕ್ಷೇತ್ರ ಶಿಕ್ಷಣಾಧಿಕಾರಿ ಟಿ. ಕೃಷ್ಣಮೂರ್ತಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಮುಖ್ಯಸ್ಥರು, ಶಾಲಾ ಕಾಲೇಜುಗಳ ಉಪನ್ಯಾಸಕರು, ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಪೋಷಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.