ಕೋಲಾರ

ಮುಳಬಾಗಲು: ದೇಶದ ಗಣ್ಯರ ಭಾವಚಿತ್ರಗಳ ಕೊಡುಗೆ

Published On :

ಮುಳಬಾಗಲು: ತಾಲೂಕಿನ ಪಟ್ರಹಳ್ಳಿ ಶಾಲೆಯ ಹಳೆಯ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿ. ಸುಧಾಕರ್ ನೇತೃತ್ವದಲ್ಲಿ ಶಾಲೆಗೆ  ಜ್ಞಾನಪೀಠ ವಿಜೇತ ಕವಿಗಳ, ಸ್ವಾತಂತ್ರ್ಯ ಹೋರಾಟಗಾರರು ಸೇರಿದಂತೆ 40 ಮಂದಿಯ ಭಾವಚಿತ್ರಗಳನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು. ಶಾಲೆಯ ಮುಖ್ಯ ಶಿಕ್ಷಕ ಬಿ.ಎಂ. ಸೋಮೇಶ್ ಮತ್ತು ಸಹಶಿಕ್ಷಕಿ ಆರ್. ವಿಮಲಮ್ಮ ನೆರವಿಗೆ ಶ್ಲಾಘಿಸಿದರು, ಗಡಿ ಶಾಲೆಯಲ್ಲಿ ಮಕ್ಕಳಿಗೆ ಗುಣತ್ಮಾಕ ಶಿಕ್ಷಣ ನೀಡಲು ಶ್ರಮಿಸುತ್ತಿರುವುದಾಗಿ ಅವರು ಕನ್ನಡ ಪ್ರಭಕ್ಕೆ ತಿಳಿಸಿದರು. ಶಾಲೆಯ ಭೂದಾನಿಗಳಾದ ಕರೇಗೌಡ ಮಾತನಾಡಿ, ಶಾಲೆ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಸುಬ್ರಮಣಿ, ಮಿದ್ದೊಳ ನಾರಾಯಣಪ್ಪ, ವಿಶ್ವನಾಥ್, ನಾರಾಯಣಮ್ಮ, ಮುನಿರತ್ನಪ್ಪ, ಲತಮ್ಮ, ಶಾಂತಮ್ಮ, ವೀಣಾ, ಪುಷ್ಟಾಪತಿ,  ಮೌನಿಕಾ, ರಾಮಕ್ಕ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.