ಕೋಲಾರ

ವಿಜೃಂಭಣೆಯ ಬ್ರಹ್ಮರಥೋತ್ಸವ

Published On :

ಶಿಡ್ಲಘಟ್ಟ: ತಾಲೂಕಿನ ಎಚ್. ಕ್ರಾಸ್‌ನಲ್ಲಿರುವ ಶ್ರೀ ಸೀತಾರಾಮಾಂಜನೇಯಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಎಚ್. ಕ್ರಾಸ್ ಸೇರಿದಂತೆ ಸುತ್ತ ಮುತ್ತಲ ಹತ್ತಾರು ಗ್ರಾಮಗಳ ಸಾವಿರಾರು ಮಂದಿ ಭಕ್ತರು ಬ್ರಹ್ಮರಥೋತ್ಸವಕ್ಕೆ ಸಾಕ್ಷಿಯಾಗಿದ್ದರು. ತಾಲೂಕಿನ ಎಚ್. ಕ್ರಾಸ್‌ನಲ್ಲಿ ಹಳೆ ಊರಿನ ದಿ. ಉದ್ದಂಡಚಾರ್ ಅವರಿಂದ ಸ್ಥಾಪಿಸಲಾದ ಶ್ರೀಸೀತಾರಾಮಾಂಜನೇಯಸ್ವಾಮಿಯ ಬ್ರಹ್ಮರಥೋತ್ಸವದ ಅಂಗವಾಗಿ ಕಳೆದ 9 ದಿನಗಳಿಂದಲೂ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಲಾಯಿತು.
ದವಳದೊಂದಿಗೆ ಬಾಳೆ ಹಣ್ಣನ್ನು ರಥದ ಮೇಲಿನ ಕಳಶಕ್ಕೆ ಎಸೆದು ತಮ್ಮ ಇಷ್ಟಾರ್ಥಗಳನ್ನು ನೆರವೇರಿಸುವಂತೆ ಭಗವಂತನಲ್ಲಿ ಪಾರ್ಥಿಸಿದ ಮಂದಿಗೆ ಲೆಕ್ಕವಿರಲಿಲ್ಲ. ಹೀಗೆ ಬೇರೊಬ್ಬರು ಎಸೆದ ಬಾಳೆ ಹಣ್ಣನ್ನು ಪ್ರಸಾದವಾಗಿ ಸ್ವೀಕರಿಸಿದರೆ ಮಾಡಿದ ಪಾಪ ಕಳೆಯುತ್ತವೆ ಎಂಬ ನಂಬಿಕೆಯಿದ್ದವರು ರಥದ ಸುತ್ತಲೂ ಬಾಳೆ ಹಣ್ಣಿಗಾಗಿ ತಡಕಾಡುವುದು, ಸಿಕ್ಕ ಬಾಳೆ ಹಣ್ಣನ್ನು ಕಣ್ಣಿಗೆ ಒತ್ತಿಕೊಂಡು ಪ್ರಸಾದವಾಗಿ ಸ್ವೀಕರಿಸುತ್ತಿದ್ದದ್ದು ಸಾಮಾನ್ಯವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.