ಕೋಲಾರ

ಶಿಕ್ಷಕರ ಸಹಕಾರ ಅಗತ್ಯ

Published On :

ಕೆಜಿಎಫ್: ಕನ್ನಡ ಸರ್ಕಾರಿ ಶಾಲೆಗಳ ಶಿಕ್ಷಕರು ಇಂತಹ ಕಾರ್ಯಕ್ರಮಗಳಲ್ಲಿ ತಮ್ಮ ಮಕ್ಕಳೊಂದಿಗೆ ಭಾಗವಹಿಸಿ ಯಶಸ್ವಿಗೊಳಿಸಬೇಕು. ಶಿಕ್ಷಣ ಇಲಾಖೆ ಯಾವೂಬ್ಬ ಅಧಿಕಾರಿಗಳು ಸುತ್ತೋಲೆಗೆ ಗೌರವ ತೋರಿಲ್ಲ ಎಂಬುದು ತಮಗೆ ಬೇಸರ ಉಂಟುಮಾಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಜೆ.ಜಿ. ನಾಗರಾಜ್ ಹೇಳಿದರು.
ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿ, ಮಕ್ಕಳಲ್ಲಿ ಸಾಹಿತ್ಯವನ್ನು ಬೆಳೆಸಲು ಶಿಕ್ಷಕರು ಮುಂದಾಗಬೇಕು. ಅದರಲ್ಲಿ ಸರ್ಕಾರಿ ಶಾಲೆಗಳಿಗಿಂತ ಖಾಸಗಿ ಶಾಲೆಗಳ ಶಿಕ್ಷಕರೇ ಮೇಲು ಈ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಿಲು ಸಹಕರಿಸಬೇಕು ಎಂದರು.
ಕೆಜಿಎಫ್ ಚಿನ್ನದ ಗಣಿ ಪ್ರದೇಶದಲ್ಲಿ ಕನ್ನಡ ಅಭಿವೃದ್ದಿಗೆ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಂಘಗಳು ಇಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳ ಹಮ್ಮಿಕೊಂಡಿದೆ. ಆದರೆ ಇಲ್ಲಿ ಬಂದಿರುವ ವಿವಿಧ ಶಾಲೆಯ ಬಹುತೇಕ ಶಿಕ್ಷರು ಆಂಗ್ಲಭಾಷೆ ಮತ್ತು ಇತರೆ ಭಾಷೆಯಲ್ಲಿ ಮಾತನಾಡುತ್ತಿರುವುದು ನಿಮ್ಮಲ್ಲಿ ಕನ್ನಡ ಅಭಿಮಾನದ ಬಗ್ಗೆ ಎಷ್ಟರಮಟ್ಟಿಗೆ ಕಾಳಜಿ ಇದೆ ಎಂಬುದು ತಿಳಿಯುತ್ತದೆ ಎಂದು ಕೆಲ ಶಿಕ್ಷರನ್ನು ತರಾಟೆಗೆ ತೆಗೆದುಕೊಂಡರು.
ಇದೇ ವೇಳೆ ಜಿಲ್ಲೆಯಾಧ್ಯಂತ ಆಗಮಿಸಿದ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಕಥಾಗೋಷ್ಠಿ, ಕವಿಗೋಷ್ಠಿ, ಚರ್ಚಾಗೋಷ್ಠಿ, ಪ್ರಬಂಧ ಸ್ಪರ್ಧೆ ನಡೆಸಲಾಯಿತು. ಈ ವೇಳೆ ಮೂವರು ಪ್ರತಿಭಾವಂತ ಮಕ್ಕಳಿಗೆ ಮತ್ತು ಇತರೆ ಮುಖ್ಯಸ್ಥರಿಗೆ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ನಾಡಗೀತೆ, ಚಿನ್ಮಯ ಶಾಲೆ ಕೋಲರ ವಿದ್ಯಾರ್ಥಿ ಜೆ.ಜಿ.ಎನ್. ಹಿತೈಷಿ, ಆಶಯ ನುಡಿ ಸುಷ್ಮಾ.ಜಿ., ಸ್ಮರಣ ಸಂಚಿಕೆ ಬಿಡುಗಡೆ ಬಿ.ಎಸ್. ವೆಂಕಟಾಚಲಪತಿ ಕನ್ನಡ ಸಂಸ್ಕೃತಿ ಇಲಾಖೆ, ಸಾಹಿತ್ಯ ಅವಲೋಕನ ರಂಜನಿ.ಕೆ.ವಿ, ಗೋಕುಲ ವಿದ್ಯಾಸಂಸ್ಥೆ, ಪಸ್ತರ ಮಳಿಗೆ ಉದ್ಘಾಟನೆ ಎಚ್.ಎ. ಪುರುಷೋತ್ತಮ್‌ರಾವ್, ವಿಜ್ಞಾನ ವಸ್ತು ಪ್ರದರ್ಶನ ಕ್ಷೇತ್ರ ಶಿಕ್ಷಣಾಧಿಕಾರಿ ಟಿ. ಕೃಷ್ಣಮೂರ್ತಿ ನೆರವೇರಿಸಿದರು.
ಕನ್ನಡ ಸಂಘದ ಅಧ್ಯಕ್ಷ ನರಸಿಂಹೇಗೌಡ ನಾರಾಣಪುರ, ಜಿಪಂ ಸದಸ್ಯ ಆ.ಮು. ಲಕ್ಷ್ಮೀನಾರಾಯಣ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿ.ಎಸ್. ಪದ್ಮನಾಭ, ಬಿ.ಎಸ್. ಪೀತಾಂಬರರಾವ್, ತ್ಯಾಗರಾಜ್ ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು, ಕನ್ನಡಪರ ಸಂಘಟನೆಗಳು, ಶಿಕ್ಷಕರ ಹಾಗೂ ಉಪನ್ಯಾಸಕರ ಸಂಘಗಳು, ಕಲಾವಿದರು, ಮುಖ್ಯಸ್ಥರು, ಅನುದಾನ, ಅನುದಾನರಹಿತ ಶಿಕ್ಷಣ ಸಂಸ್ಥೆಗಳು, ಕೆಜಿಎಫ್‌ನ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.