ಹೈನುಗಾರಿಕೆ ರಕ್ಷಣೆ ಕೋಚಿಮುಲ್ ಹೊಣೆ
ಕೋಲಾರ: ಕಾಲುಬಾಯಿ ಜ್ವರದಂತಹ ಮಾರಕ ರೋಗಗಳ ಬಗ್ಗೆ ರೈತರಿಗೆ ಅರಿವು ಮೂಡಿಸಿ ಜಿಲ್ಲೆಯ ಜೀವನಾಡಿಯಾದ ಹೈನೋದ್ಯಮವನ್ನು ಉಳಿಸುವ ಕೆಲಸವನ್ನು ಕೋಚಿಮುಲ್ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಮಾಜಿ ಶಾಸಕ ಹಾಗೂ ಇಪ್ಕೋ ಟೋಕಿಯೋ ವಿಮಾ ಕಂಪನಿ ಅಧ್ಯಕ್ಷ ಕೆ. ಶ್ರೀನಿವಾಸಗೌಡ ಸಲಹೆ ನೀಡಿದರು.
ತಾಲೂಕಿನ ಚೆಲುವನಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ನಿರಂತರ ಬರಗಾಲ ಹಾಗೂ ಅಂತರ್ಜಲ ಮಟ್ಟ ಕುಸಿತದಿಂದ ಹೈನೋದ್ಯಮಮೊಂದೇ ಜಿಲ್ಲೆಯ ಜೀವನಾಡಿಯಾಗಿ ರೈತರನ್ನು ರಕ್ಷಿಸುತ್ತಿದೆ ಎಂದ ಅವರು ಈ ಉದ್ಯಮಕ್ಕೆ ಹಾನಿಯಾಗದಂತೆ ತಡೆಯಲು ಸರ್ಕಾರ ಮತ್ತು ಪಶುಪಾಲನಾ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ರೈತರು ಪ್ರತಿ 15 ದಿನಕ್ಕೊಮ್ಮೆ ಹಣ ನೋಡುವಂತಾಗಿದೆ, ಅವರ ಆರ್ಥಿಕ ಸ್ಥಿತಿಗೆ ಈ ಉದ್ಯಮ ನೆರಳು ನೀಡಿದೆ ಎಂದ ಅವರು, ಇತ್ತೀಚೆಗೆ ಕಾಲುಬಾಯಿ ಜ್ವರದಿಂದ ಹಸುಗಳನ್ನು ಕಳೆದುಕೊಂಡವರಿಗೆ ಸರ್ಕಾರ ಸೂಕ್ತ ಪರಿಹಾರವನ್ನು ವಿತರಿಸಬೇಕು ಎಂದರು.
ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುತ್ತಿರುವುದರಿಂದ ಹಾಲಿನ ಉತ್ಪಾದನೆಯೂ ಹೆಚ್ಚಾಗಿದೆ, ಖಾಸಗಿ ಹಾಲು ಶೇಖರಣಾ ಸಂಸ್ಥೆಗಳಿಗೂ ಕಡಿವಾಣ ಬಿದ್ದಿದೆ ಎಂದರು. ಗ್ರಾಮಗಳಲ್ಲಿ ರಾಜಕೀಯ ಚುನಾವಣೆಗೆ ಸೀಮಿತವಾಗಿರಬೇಕು, ನಂತರ ಎಲ್ಲರೂ ಅಣ್ಣತಮ್ಮಂದಿರಂತೆ ಊರಿನ ಅಭಿವೃದ್ಧಿಗೆ ಮಾತ್ರ ಒತ್ತು ನೀಡಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಕೋಚಿಮುಲ್ ಅಧ್ಯಕ್ಷ ಕೆ.ಗುಡಿಯಪ್ಪ, ಹಾಲು ಉತ್ಪಾದಕರ ಸಹಕಾರ ಸಂಘಗಳು ರಾಜಕೀಯದಿಂದ ಹೊರತಾಗಿದ್ದು, ರೈತರ ರಕ್ಷಣೆಗೆ ಒತ್ತು ನೀಡಬೇಕೆಂದರು.
ಕೋಚಿಮುಲ್ಗೆ ಪ್ರತಿ ನಿತ್ಯ 9 ಲಕ್ಷ ಲೀಟರ್ಗೂ ಹೆಚ್ಚು ಹಾಲು ಬರುತ್ತಿದೆ, ಮಾರುಕಟ್ಟೆ ಸಮಸ್ಯೆಯೂ ಇದೆ, ಇದನ್ನು ಸರಿದೂಗಿಸಲು ಕೆಎಂಎಫ್ನ ಸಹಕಾರ ಕೋರಲಾಗಿದೆ, ಜತೆಗೆ ಮಾರುಕಟ್ಟೆ ಅಭಿವೃದ್ಧಿಗೂ ಒತ್ತು ನೀಡಲಾಗಿದೆ ಎಂದರು.
ರಾಜ್ಯ ಸರ್ಕಾರದ ಕ್ಷೀರ ಭಾಗ್ಯ ಯೋಜನೆಯಿಂದಾಗಿ ಹಾಲು ಒಕ್ಕೂಟಗಳು ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.
ಚೆಲುವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸಿ. ಗೋವಿಂದಗೌಡ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಎಪಿಎಂಸಿ ಅಧ್ಯಕ್ಷೆ ರಾಜೇಶ್ವರಿ, ಕೋಚಿಮುಲ್ ನಿರ್ದೇಶಕರಾದ ಮಾಜಿ ಅಧ್ಯಕ್ಷ ಎ.ವಿ. ಪ್ರಸನ್ನ, ಮದ್ದೇರಿ ರಾಮೇಗೌಡ, ಗಂಗಮ್ಮ, ಟಿಎಪಿಸಿಎಂಎಸ್ ಅಧ್ಯಕ್ಷ ನಾಗನಾಳ ಸೋಮಣ್ಣ, ಜಿಪಂ ಮಾಜಿ ಅಧ್ಯಕ್ಷೆ ಚೌಡೇಶ್ವರಿ ರಾಮಚಂದ್ರ, ಕೋಚಿಮುಲ್ ಉಪವ್ಯವಸ್ಥಾಪಕರಾದ ಎನ್. ಕೃಷ್ಣಾರೆಡ್ಡಿ, ಡಾ.ಎ.ಸಿ.ಶ್ರೀನಿವಾಸಗೌಡ, ವಿಸ್ತರಣಾಧಿಕಾರಿ ಶ್ರೀನಿವಾಸ್, ಗ್ರಾ.ಪಂ ಸದಸ್ಯರಾದ ನಾರಾಯಣಸ್ವಾಮಿ, ಅಪ್ಪೋಜಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

