'ಅಂಗವೈಕಲ್ಯದ ಮಕ್ಕಳಿಗೆ ಪ್ರೋತ್ಸಾಹ ಅಗತ್ಯ'
ಬಂಗಾರಪೇಟೆ: ಅಂಗವೈಕಲ್ಯದ ಮಕ್ಕಳಿಗೆ ಅನುಕಂಪ ತೋರುವ ಬದಲು ಪ್ರೋತ್ಸಾಹ ನೀಡಿದರೆ ಅವರೂ ಸಮಾಜದಲ್ಲಿ ಬದುಕಲು ಸಹಾಯವಾಗುತ್ತದೆ ಎಂದು ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ ಸಿದ್ದಗಂಗಯ್ಯ ಹೇಳಿದರು.
ಪಟ್ಟಣದ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಅಂಗವಿಕಲರ ದಿನಾಚರಣೆಯಲ್ಲಿ ಅಂಗವೈಕಲ್ಯ ಮಕ್ಕಳಿಗೆ ಏರ್ಪಡಿಸಿದ್ದ ವಿವಿಧ ಕ್ರೀಡಾಚಟುವಟಿಕೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿ, ಅಂಗವೈಕಲ್ಯ ಹೊಂದಿರುವ ಮಕ್ಕಳನ್ನು ನಿರ್ಲಕ್ಷ್ಯ ಮಾಡದೆ ಎಲ್ಲಾ ಶಾಲೆಗಳಲ್ಲಿ ಎಲ್ಲರಂತೆ ಕಾಣಬೇಕು ಇದನ್ನು ಕಡೆಗಣಿಸಿದರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಕ್ಷೇತ್ರದ ಸಮನ್ವಯಾಧಿಕಾರಿ ಜೆ.ಬಿ. ಯುವರಾಜು ಮಾತನಾಡಿ, ಮಕ್ಕಳಲ್ಲಿ ಅಪೌಷ್ಟಿಕತೆಯಿಂದ ಬಾಲ್ಯದಲ್ಲೇ ಅಂಗವೈಕಲ್ಯ ಉಂಟಾಗುತ್ತಿದೆ. ಇದನ್ನು ತಡೆಯಲು ಸರ್ಕಾರ ಶಾಲೆಗಳಲ್ಲೇ ಮಕ್ಕಳಿಗೆ ವಿಟಮಿನ್ ಮಾತ್ರೆಗಳನ್ನು ನೀಡುತ್ತಿದೆ. ಇದರ ಜೊತೆಗೆ ಕ್ಷೀರಭಾಗ್ಯ, ಅನ್ನಭಾಗ್ಯ, ಗೋದಿ ಭಾಗ್ಯ, ಮೊಟ್ಟೆ ಭಾಗ್ಯ ಜಾರಿಗೆ ತಂದಿದೆ. ಇದನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡರೆ ಅಂಗವೈಕಲ್ಯಯಿಂದ ಪಾರಾಗಬಹುದು ಎಂದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಚಂದ್ರಶೇಖರಗೌಡ, ಆರ್. ಶ್ರೀನಿವಾಸ್, ಭಾಗ್ಯಲಕ್ಷ್ಮೀ, ಅಪ್ಪಾಜಿಗೌಡ, ಮುನಿರಾಜು, ರಮಣಪ್ಪ, ಖಾದರ್ ಪಾಷ, ನಾರಾಯಣಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

