ಕೋಲಾರ

ಕಾಡಾನೆಗಳು ಬೀಡು ಬಿಟ್ಟ ಜಾಗಕ್ಕೆ ಡಿಸಿ ಭೇಟಿ

Published On :

ಬಂಗಾರಪೇಟೆ: ಕಾಡಾನೆಗಳ ಹಾವಳಿಯಿಂದ ತತ್ತರಿಸಿರುವ ಗಡಿ ಭಾಗದ ರೈತರನ್ನು ಸಮಾಧಾನಪಡಿಸಿ ಧೈರ್ಯ ತುಂಬಲು ಕೋಲಾರ ಜಿಲ್ಲಾಧಿಕಾರಿ ಡಿ.ಕೆ. ರವಿ ಅವರು ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಗಡಿ ಭಾಗವಾದ ಯರಗೋಳ್, ದಾಸರಮಲ್ಲ, ತೊಪ್ಪನಹಳ್ಳಿ, ಶಿವಲಿಂಗ ತಮಟಮಾಕನಹಳ್ಳಿ ಮತ್ತಿತರೆ ಕಾಡು ಪ್ರದೇಶಗಳಿಗೆ ತೆರಳಿ ಆನೆಗಳ ಹಿಂಡು ಯಾವ ಮಟ್ಟದಲ್ಲಿ ರೈತರ ಬೆಳೆನಾಶ ಮಾಡಿವೆ ಎಂಬುದನ್ನು ಖುದ್ದಾಗಿ ಪರಿಶೀಲಿಸಲು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಕಾಡಿಗೆ ತೆರಳಿ ಅವಲೋಕಿಸಿದರು. ನಂತರ ಆನೆಗಳು ಬೆಳೆ ನಾಶ ಮಾಡಿರುವ ಕೆಲವು  ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ರೈತರು, ಅರಣ್ಯ ಇಲಾಖೆ ಸಿಬ್ಬಂದಿಯ ಕೊರತೆಯ ನಡುವೆಯೂ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮತ್ತಷ್ಟು ಸಿಬ್ಬಂದಿ ನಿಯೋಜಿಸಬೇಕು ಹಾಗೂ ಈಗಾಗಲೇ ಆನೆಗಳ ದಾಳಿಯಿಂದ ನಷ್ಟಕ್ಕೊಳಗಾಗಿರುವ ರೈತರಿಗೆ ತ್ವರಿತವಾಗಿ ಪರಿಹಾರ ಕೊಡಿಸಬೇಕು ಎಂದು ಮನವಿ ಸಲ್ಲಿಸಿದರು.
ರೈತರು ಆತಂಕಪಡುವ ಅಗತ್ಯವಿಲ್ಲ ಸರ್ಕಾರ ಆನೆಗಳನ್ನು ಓಡಿಸಲು ಕ್ರಮ ಕೈಗೊಂಡಿದೆ. ಕಾರ್ಯಾಚರಣೆಯಲ್ಲಿ ವಿಳಂಬವಾಗಿರಬಹುದು ತ್ವರಿತವಾಗಿ ಮರಳಿ ಗೂಡಿಗೆ ಓಡಿಸಿ ರೈತರಿಗೆ ಮುಕ್ತಿಕಾಣಿಸುವುದಾಗಿ ಭರವಸೆ ನೀಡಿದರು. ವಲಯ ಅರಣ್ಯಾಧಿಕಾರಿ ಚಂದ್ರಶೇಖರರೆಡ್ಡಿ ಜೊತೆಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.