ಅಪರಾಧ ಪ್ರಕರಣ ತಡೆಯಲು ಅಗತ್ಯ ಕ್ರಮ
ಕೆಜಿಎಫ್: ಕೆಜಿಎಫ್ ಪೊಲೀಸ್ ಜಿಲ್ಲಾ ವಲಯದಲ್ಲಿ ಅಪರಾಧ ಪ್ರಕರಣ ತಡೆಯಲು ಅಗತ್ಯ ಕ್ರಮಗಳನ್ನು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಡಾ. ರೋಹಿಣಿ ಕಟೋಚ್‌ಸಫೆಟ್ ಅವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ ಎಂದು ಕೇಂದ್ರ ವಲಯ ಐಜಿಪಿ ಅಮರ್‌ಕುಮಾರ್ ಪಾಂಡೆ ಶುಕ್ರವಾರ ತಿಳಿಸಿದರು.
ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇತ್ತೀಚೆಗೆ ಬೇತಮಂಗಲ ಗ್ರಾಮದ ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ಪೊಲೀಸ್ ತಂಡ ರಚಿಸಲಾಗಿದ್ದು ಅತಿ ಶೀಘ್ರದಲ್ಲಿ ಈರೋಪಿಗಳನ್ನು ಬಂಧಿಸಲಾಗುತ್ತದೆ ಎಂದರು.
ಬಿಜಿಎಂಎಲ್ ಚಿನ್ನದಗಣಿ ಕಳುವು ಪ್ರಕರಣದಲ್ಲಿ ಈಗಾಗಲೇ ಪೊಲೀಸ್ ಮತ್ತು ಬಿಜಿಎಂಎಲ್ ಭದ್ರತಾಧಿಕಾರಿಗಳು ಸೇರಿದಂತೆ ಇತರೇ ಆರೋಪಿಗಳನ್ನು ಬಂಧಿಸಿ ಕ್ರಮಕೈಗೊಳ್ಳಲಾಗಿದ್ದು ತಲೆ ಮರೆಸಿಕೊಂಡಿರುವ ಇತರೆ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದರು. ಸಾರ್ವಜನಿಕರ ದೂರುಗಳಿಗೆ ಸ್ಪಂಧಿಸುವ ನಿಟ್ಟಿನಲ್ಲಿ ಮೊಬೈಲ್ ಕಂಟ್ರೋಲ್ ರೂಮ್ ವ್ಯವಸ್ಥೆ ಮಾಡಲಾಗಿದೆ. ಬಂಗಾರಪೇಟೆ, ರಾಬರ್ಟ್‌ಸನ್‌ಪೇಟೆ ಮತ್ತು ಉರಿಗಾಂ ವೃತ್ತಗಳಲ್ಲಿ ಪೊಲೀಸ್ ಕಂಟ್ರೋಲ್ ವಾಹನಗಳನ್ನು ಪ್ರಾರಂಭಿಸಲಾಗಿದ್ದು, ಪ್ರತಿ ಸಂಚಾರಿ ವಾಹನದಲ್ಲಿ ಒರ್ವ ಎಎಸ್‌ಐ ಮತ್ತು ಇಬ್ಬರು ಸಿಬ್ಬಂದಿಯನ್ನು ನೇಮಿಸಲಾಗಿದೆ. ಜನಸಾಮಾನ್ಯರಿಗೆ ತಕ್ಷಣ ಸ್ಪಂಧಿಸುವ ಅಪತ್ಬಾಂಧವ ಹಾಗೂ ಹೊಯ್ಸಳ ಮಾದರಿಯಲ್ಲಿ ಕಾರ್ಯನಿರ್ವಹಿಸಲಾಗುತ್ತದೆ. ಕೆಜಿಎಫ್‌ನಲ್ಲಿ ಸಂಚಾರ ನಿಯಂತ್ರಣ ಪೊಲೀಸ್ ಠಾಣೆಗಳನ್ನು ತೆರೆಯಲು ಕ್ರಮ ಕೈಗೊಂಡಿದ್ದು ಶೀಘ್ರದಲ್ಲಿ ಪ್ರಾರಂಭಿಸಲಾಗುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

