ಕೋಲಾರ

ಮಾಲೂರಿನಲ್ಲಿ ದಿನಾಚರಣೆ

Published On :

ಮಾಲೂರು: ದೇಶದಲ್ಲಿ ಸರ್ವರೂ ಸಮಪಾಲು-ಸಮಬಾಳು ಹೊಂದಿರಬೇಕೆಂಬ ಆಶಯ ಹೊಂದಿದ್ದ ಡಾ.ಅಂಬೇಡ್ಕರ್ ಪ್ರಪಂಚ ಕಂಡ ಅತ್ಯುತ್ತಮ ಸಂವಿಧಾನಕಾರ ಎಂದು ದಲಿತ ಮುಖಂಡ ಪಾಪಣ್ಣ ಹೇಳಿದರು. ಡಾ.ಬಿ.ಆರ್. ಅಂಬೇಡ್ಕರ್ ಅವರ  57ನೇ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಶುಕ್ರವಾರ ಪಟ್ಟಣದ ಬಸ್‌ನಿಲ್ದಾಣ ಬಳಿಯ ಉದ್ಯಾನವನದ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಹೂವಿನ ಹಾರ ಹಾಕಿ ಗೌರವ ಸೂಚಿಸಿ ಮಾತನಾಡಿ, ಶೋಷಿತ ಜನರನ್ನು ಜಾಗೃತಗೊಳಿಸಲು ತಮ್ಮ ಜೀವನವನ್ನೇ ಮುಡುಪಿಟ್ಟ ಧೀಮಂತ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಎಂದರು. ಆಂಜಿನಪ್ಪ, ತಾಪಂ ಅಧ್ಯಕ್ಷ ಪುಟ್ಟಸ್ವಾಮಿ,ಪ ುರಸಭೆ ಸದಸ್ಯ ವೇಮನ, ಮುರಳೀಧರ್ ತಿ. ಶ್ರೀನಿವಾಸ್, ವೆಂಕಟೇಶ್ ಮಾತನಾಡಿದರು. ಅರಳೇರಿ ನಾರಾಯಣಸ್ವಾಮಿ, ಕೂ. ಗೋಪಾಲ್, ಪುರಸಭೆ ಮುಖ್ಯಾಧಿಕಾರಿ ರೇಣುಕಾ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಮಸ್ವಾಮಿ, ಜಿಪಂ ಸದಸ್ಯ ರಾಮಸ್ವಾಮಿ ರೆಡ್ಡಿ ಇದ್ದರು. ಇದೇ ಸಂಧರ್ಭದಲ್ಲಿ  ದಲಿತ ಸಾಂಸ್ಕೃತಿಕ ಕಲಾ ತಂಡದವರಿಂದ ಗಾಯನ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.