ವಿದ್ಯುತ್ ಸಮಸ್ಯೆ ನಿವಾರಣೆಗೆ ಆಗ್ರಹ
ಕ.ಪ್ರ.ವಾರ್ತೆ ಕೋಲಾರ ಡಿ.6
ವಿದ್ಯುತ್ ವ್ಯತ್ಯಯ ನಿಲ್ಲಿಸಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಜಿಲ್ಲಾ ಕಾರ್ಯನಿರ್ವಾಹಕ ಅಭಿಯಂತರರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕೋಟಿಗಾನಹಳ್ಳಿ ಗಣೇಶ್ ಗೌಡ ಮಾತನಾಡಿ, ಕೋಲಾರ ಜಿಲ್ಲೆಯಲ್ಲಿ ಬರಗಾಲದ ಸಂದರ್ಭದಲ್ಲು ಬರುವ ಅಲ್ಪಸ್ವಲ್ಪ ನೀರಿನಿಂದ ರೈತರು ಬೆಳೆ ಬೆಳೆಯುತ್ತಿದ್ದರು ಸಮರ್ಪಕವಾಗಿ ವಿದ್ಯುತ್ ನೀಡದೆ ಬೆಸ್ಕಾಂ ಸಂಸ್ಥೆಯ ಅಧಿಕಾರಿಗಳು ರೈತರನ್ನು ವಂಚಿಸುತ್ತಿದ್ದಾರೆ ಎಂದು ಆರೋಪಿಸಿದರು.
ಅಂತರ್ಜಲಮಟ್ಟ ಕುಸಿದಿರುವ ಕಾರಣದಿಂದಾಗಿ ಜನ ಜಾನುವಾರುಗಳು ಕುಡಿಯುವ ನೀರಿಗೆ ಆಹಾಕಾರ ಬೀಳುವ ಪರಿಸ್ಥಿತಿ ಎದುರಾಗಿದೆ. ಸರ್ಕಾರ ನಿಗಧಿ ಪಡಿಸಿರುವ ವೇಳಾ ಪಟ್ಟಿ ಅನುಸರಿಸಿ ವಿದ್ಯುತ್ ನೀಡದೆ, ತಮಗೆ ಇಷ್ಟ ಬಂದ ಹಾಗೆ ವಿದ್ಯುತ್ ನೀಡುವುದು ಸರಿಯಲ್ಲ ಎಂದು ದೂರಿದರು.
ಬೆಸ್ಕಾಂಗೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆಯನ್ನು ಮೂಲಕ ದೂರು ನೀಡಿದರೆ ಸರಿಯಾಗಿ ಉತ್ತರ ನೀಡುತ್ತಿಲ್ಲ. ಸಮರ್ಪಕವಾಗಿ ವಿದ್ಯತ್ ನೀಡದೆ ಇದ್ದರೆ ಬೆಸ್ಕಾಂ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಜಿಲ್ಲಾ ಉಪಾಧ್ಯಕ್ಷ ಪ್ರಭಾಕರ್ ಗೌಡ ಮಾತನಾಡಿ, ಶ್ರೀನಿವಾಸಪುರ ಪಟ್ಟಣದ ಜಗಜೀವನರಾಂ ಪಾಳ್ಯದ ಪರಿಶಿಷ್ಟಜಾತಿಗೆ ಸೇರಿದ ಹನುಮಂತಪ್ಪ ಎಂಬುವರಿಗೆ ಗಂಗಾಕಲ್ಯಾಣ ಯೋಜನೆಯಲ್ಲಿ ಕೊಳವೆಬಾವಿ 2006ರಲ್ಲಿ ಮಂಜೂರಾಗಿದ್ದು ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲು ಸುಮಾರು 5 ಲಕ್ಷ ರು. ಮೌಲ್ಯದ ಸಲಕರಣೆಗಳನ್ನು ಗುತ್ತಿಗೆದಾರ ಶ್ರೀನಿವಾಸ್ ಎಂಬುವರಿಗೆ ನೀಡಿದ್ದು, ಸದರಿ ಗುತ್ತಿಗೆದಾರ ವಿದ್ಯುತ್ ಸಂಪರ್ಕ ಕಲ್ಪಿಸಿಕೊಟ್ಟಿಲ್ಲ, ಈ ಬಗ್ಗೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರು ಯಾವುದೇ ಕ್ರಮಕೈಗೊಂಡಿಲ್ಲ, ಕೊಳವೆಬಾವಿಯಿಂದ ನೀರು ಹೊರತೆಗೆಯಲು ಸಾಧ್ಯವಾಗದೆ ಇರುವುದು ಅಧಿಕಾರಿಗಳ ನಿರ್ಲಕ್ಷ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಗೌರವಾಧ್ಯಕ್ಷ ತೆರ್ನಹಳ್ಳಿ ವೆಂಕಟೇಶ್ ಗೌಡ, ಜಿಲ್ಲಾ ಕಾರ್ಯದರ್ಶಿ ಮುಜುಬ್ ಬಾಷ, ಹೊಳಿಲಿ ಚಂದ್ರಪ್ಪ, ದೊಡ್ನಹಳ್ಳಿ ಕೃಷ್ಣಪ್ಪ, ಮಾಸ್ತೇನಹಳ್ಳಿ ನಾರಾಯಣಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

