ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಿಸಲು ಆಗ್ರಹ
ಕೆಜಿಎಫ್: ದುರಸ್ತಿಗೊಂಡಿರುವ ಬಸ್ ನಿಲ್ದಾಣದಲ್ಲಿ ಶೇರ್ ಆಟೋ ನಿಲ್ದಾಣ, ಮಾದರಿಯ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಿಸಬೇಕು ಎಂದು ಒತ್ತಾಯಿಸಿ ಮಾಜಿ ಶಾಸಕ ಎಸ್. ರಾಜೇಂದ್ರನ್ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ನಗರಸಭೆ ಬಸ್ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಮಾಜಿ ಶಾಸಕ ಎಸ್. ರಾಜೇಂದ್ರನ್, ತಾವು ಶಾಸಕರಾಗಿದ್ದ ಅವಧಿಯಲ್ಲಿ ಕೆಜಿಎಫ್ ನಗರವನ್ನು ಹೆಚ್ಚಿನ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ನಗರಸಭೆ ಬಸ್ ನಿಲ್ದಾಣ ಸ್ಥಳಾಂತರಿಸಿ ಈ ಸ್ಥಳದಲ್ಲಿ ಎಪಿಎಂಸಿ ಯಾರ್ಡ್, ಶಾಪಿಂಗ್ ಕಾಂಪ್ಲೆಕ್ಸ್, ಮಾದರಿ ವಾಹನ ನಿಲ್ದಾಣ ಮಾಡಿ 2007ರಲ್ಲಿ ರು. 60 ಲಕ್ಷ ವೆಚ್ಚದಲ್ಲಿ ನಗರಸಭೆ ಪಕ್ಕದಲ್ಲಿ ರಾಜ್ಯ ರಸ್ಥೆ ಸಾರಿಗೆ ಸಂಸ್ಥೆಯ ನೂತನ ಬಸ್ ನಿಲ್ದಾಣ ನಿರ್ಮಿಸಿದ್ದು ಖಾಸಗಿ ಬಸ್ಗಳನ್ನು ಆಂಡ್ರಸನ್ಪೇಟೆ ಬಸ್ ನಿಲ್ದಾಣಕ್ಕೆ ಹೋಗಿ ಬರುವ ಮೂಲಕ ಆ ಪ್ರದೇಶದ ಜನತೆಗೆ ಅನುಕೂಲಕ್ಕಾಗಿ ಕ್ರಮಕೈಗೊಳ್ಳಲಾಗಿತ್ತು ಎಂದರು.
ಆದರೆ ಸಾರಿಗೆ ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು ಮತ್ತು ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯತೆಯಿಂದ ನೂತನ ಬಸ್ ನಿಲ್ದಾಣ ಉಪಯೋಗಕ್ಕೆ ಬಾರದೆ ಹಾಳಾಗುತ್ತಿದೆ. ಆದ್ದರಿಂದ ಸರ್ಕಾರಿ ಬಸ್ಗಳನ್ನು ನೂತನ ಬಸ್ ನಿಲ್ದಾಣಕ್ಕೆ ಸ್ಥಳಾಂತರಿಸಿ ಖಾಸಗಿ ಬಸ್ಗಳು ಆಂಡ್ರಸನ್ಪೇಟೆ ಬಸ್ ನಿಲ್ದಾಣಕ್ಕೆ ಕಾರ್ಯನಿರ್ವಹಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು ಇಲ್ಲವಾದಲ್ಲಿ ಉಗ್ರಹೋರಾಟ ನಡೆಸುವುದಾಗಿ ತಿಳಿಸಿದರು.
ಪ್ರತಿಭಟನೆಗೆ ಬೆಂಬಲ ಸೂಚಿಸಿದ ಮಾಜಿ ಶಾಸಕ ಎಂ. ಭಕ್ತವತ್ಸಲಂ ಮಾತನಾಡಿ, ಬಸ್ ನಿಲ್ದಾಣದ ದುರಸ್ತಿಗೆ ನಗರಸಭೆಯಿಂದ 1.5 ಕೋಟಿ ಅನುದಾನ ಬಿಡುಗಡೆಯಾಗಿದೆ. ಮಾಜಿ ಶಾಸಕ ವೈ. ಸಂಪಂಗಿ ತಮ್ಮ ರಾಜಕೀಯ ಲಾಭಕ್ಕಾಗಿ ಕೆಲ ಅಡಚಣೆಗಳನ್ನು ಉಂಟುಮಾಡಿದರು ಎಂದು ಆರೋಪಿಸಿದರು. ಸ್ಥಳಕ್ಕಾಗಮಿಸಿದ ನಗರಸಭೆ ಪೌರಾಯುಕ್ತ ವಿ. ಬಾಲಚಂದ್ರ ಮಾತನಾಡಿ, ಸರಿಯಾದ ದಾಖಲೆಗಳಿಲ್ಲದೆ ಸಂಚರಿಸುತ್ತಿರುವ ಖಾಸಗಿ ಬಸ್ಗಳ ವಿರುದ್ಧ ಕ್ರಮ ಜರುಗಿಸಲು ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆ ಮುಂದಾಗಬೇಕು ಎಂದರು. ಪ್ರತಿಭಟನೆಯಲ್ಲಿ ಆರ್ಪಿಐ ಪಕ್ಷದ ರಾಜ್ಯ ಉಪಾಧ್ಯಕ್ಷೆ ಶಾಂತಿ, ಅಧ್ಯಕ್ಷ ಕೆ.ಎಸ್. ನಟರಾಜನ್, ಉಪಾಧ್ಯಕ್ಷ ಮಿಲಂದ್, ಕಾರ್ಯದರ್ಶಿ ಕುಬೇಂದ್ರಕುಮಾರ್, ಅಭಿಮಣ್ಣನ್, ಶಿವಕುಮಾರ್, ಅಂಬೇತ್, ಪಾಂಡಿಯನ್, ಪ್ರಸಾದ್, ಪಿ. ದಯಾನಂದ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

