ಶೋಷಿತ ವರ್ಗದ ಏಳಿಗೆಯ ಹರಿಕಾರ ಅಂಬೇಡ್ಕರ್
ಬಂಗಾರಪೇಟೆ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕೇವಲ ದಲಿತ ಸಮುದಾಯಕ್ಕೆ ಮಾತ್ರ ದಾರಿ ದೀಪವಾಗಿರದೇ ಎಲ್ಲಾ ಶೋಷಿತ ವರ್ಗದವರ ಏಳಿಗೆಗೆ ಶ್ರಮಿಸಿದ ಮಹಾನ್ ವ್ಯಕ್ತಿಯಾಗಿದ್ದರು ಅಂಬೇಡ್ಕರ್ ಜನಪರ ಕಾಳಜಿ ಇಂದಿನ ರಾಜಕಾರಣಿಗಳು ಅಳವಡಿಸಿಕೊಳ್ಳಬೇಕೆಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ತಿಳಿಸಿದರು.
ಅಂಬೇಡ್ಕರ್ ಪರಿನಿರ್ವಾಣದಿನದ ಅಂಗವಾಗಿ ಪಟ್ಟಣದ ಕೋಲಾರ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾತನಾಡುತ್ತಾ ಅಂಬೇಡ್ಕರ್ ಇಲ್ಲದಿದ್ದರೆ ಇಂದು ಹಲವು ಶೋಷಿತ ಸಮುದಾಯಗಳು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ ಇಂತಹ ವ್ಯಕ್ತಿಯನ್ನು ಕೇಲವ ಒಂದು ವರ್ಗಕ್ಕೆ ಸೀಮಿತಗೊಳಿಸುವುದರಲ್ಲಿ ಅರ್ಥವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಂಬೇಡ್ಕರ್ ಪರಿನಿರ್ವಾಣದ ಹಿಂದಿನ ದಿನ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಪರಿಶಿಷ್ಟರ ಉಪಯೋಜನೆ ವಿಧೇಯಕಕ್ಕೆ ಅಂಕಿತ ಸಿಕ್ಕಿರುವುದನ್ನು ಸ್ವಾಗತಿಸಿರುವ ಶಾಸಕರು. ಈ ವಿಧೇಯಕದ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ರಾಜ್ಯ ಯೋಜನಾ ವೆಚ್ಚ ಹಂಚಿಕೆ ಮಾಡಲಾಗುತ್ತದೆ ಇದನ್ನು ಬೇರೆ ಉದ್ದೇಶಗಳಿಗೆ ಉಪಯೋಗಿಸುವಂತಿಲ್ಲ ಒಂದು ವೇಳೆ ಹಣ ಬಳಸದೆ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳಿಗೆ ಕಠಿಣ ಶಿಕ್ಷೆ ಕೊಡಲಾಗುವುದು ಹಾಗೂ ಆಯಾ ವರ್ಷದಲ್ಲಿ ಹಣವನ್ನು ಬಳಸಿಕೊಳ್ಳಬೇಕು ತಪ್ಪಿದರೆ ಮುಂದಿನ ವರ್ಷವಾದರು ಉಪಯೋಗಿಸಬೇಕು ವಿನಃ ಬೇರೆ ಕಾರ್ಯಗಳಿಗೆ ಉಪಯೋಗಿಸಬಾರದು ಈ ಮಹತ್ವವಾದ ವಿಧೇಯಕವನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.
ಸಮಾಜದ ಕಟ್ಟ ಕಡೇಯ ವ್ಯಕ್ತಿಗೂ ಮೊಟ್ಟ ಆದ್ಯತೆ ನೀಡಬೇಕು ಎಂಬುದೇ ಇದರ ಆಶಯವಾಗಿದೆ ಎಂದರು. ಇದಲ್ಲದೆ ಕ್ಷೇತ್ರ ಅಭಿವೃದ್ಧಿಗೆ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗಿದೆ ಇದಕ್ಕೆ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆಂದು ತಿಳಿಸಿದರು.
ಪಟ್ಟಣದ ಎಲ್ಲಾ ವಾರ್ಡುಗಳಲ್ಲಿ ನಾಗರಿಕರು ಎದುರಿಸುತ್ತಿರುವ ಹಲವು ಗಂಬೀರ ಸಮಸ್ಯೆಗಳಿಗೆ ಅವರ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದಾಗಿ ನಾಳೆ ಶನಿವಾರ ಅಧಿಕಾರಿಗಳೊಂದಿಗೆ ಪಟ್ಟಣದಲ್ಲಿ ಪಾದಯಾತ್ರೆ ಮೂಲಕ ಜನರ ಸಮಸ್ಯೆಗಳನ್ನು ಆಲಿಸುವುದಾಗಿ ಶಾಸಕ ನಾರಾಯಣಸ್ವಾಮಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

