ಕೋಲಾರ

ಹೆದ್ದಾರಿ ತಡೆ: ರೈತರ ಬಂಧನ, ಬಿಡುಗಡೆ

Published On :

ಬಾಗೇಪಲ್ಲಿ: ರಾಷ್ಟ್ರೀಯ ಹೆದ್ದಾರಿ 7ರ ಅಗಲೀಕರಣಕ್ಕಾಗಿ ಕೃಷಿ ಜಮೀನನ್ನು ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿಯ ಕೈಗೊಂಡ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಸಮಿತಿಯ ಕಾರ್ಯಕರ್ತರು ಹಾಗೂ ಜಮೀನು ಕಳೆದುಕೊಂಡಿರುವ ರೈತರು ಪಟ್ಟಣಕ್ಕೆ ಸಮೀಪದಲ್ಲಿರುವ ರಾಷ್ಟ್ರೀಯ ಹೆದ್ದಾರಿ 7ರಲ್ಲಿನ ಟೋಲ್ ಪ್ಲಾಜಾ ಬಳಿ ಹೆದ್ದಾರಿ ತಡೆ ನಡೆಸಿ ಪ್ರತಿಭಟಿಸಿದರು.
ಪ್ರತಿಭಟನಕಾರರನ್ನುದ್ದೇಶಿ ಮಾತನಾಡಿದ ಸಂಘದ ತಾಲೂಕು ಅಧ್ಯಕ್ಷ ಬಿ. ನಾರಾಯಣಸ್ವಾಮಿ,ಸರ್ಕಾರದಿಂದ ಬರುವ ಸವಲತ್ತುಗಳನ್ನು ಸಾರ್ವಜನಿಕರಿಗೆ ಹಾಗೂ ರೈತರಿಗೆ ನೀಡುವಲ್ಲಿ ಜಿಲ್ಲಾ ಯಂತ್ರಾಂಗ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.
ರಾಷ್ಟ್ರೀಯ ಹೆದ್ದಾರಿ-7 ರ ಅಗಲೀಕರಣ ಮತ್ತು ಬೈಪಾಸ್ ನಿರ್ಮಿಸಲು ರೈತರ ಕೃಷಿ ಜಮೀನನ್ನು ವಶಪಡಿಸಿಕೊಂಡು ಸುಮಾರು 5 ವರ್ಷಗಳು ಕಳೆದರೂ ಸಹ ನ್ಯಾಯಯುತವಾದಂತಹ ಪರಿಹಾರವನ್ನು ವಿತರಿಸದೇ ಹೆದ್ದಾರಿ ಪ್ರಾಧಿಕಾರ, ಸರ್ಕಾರ ಮತ್ತು ಜಿಲ್ಲಾಡಳಿತ ರೈತರನ್ನು ವಂಚಿಸುತ್ತಿದೆ ಎಂದರು. ಒಂದು ಎಕರೆ ಜಮೀನಿಗೆ ಕೇವಲ 20 ಲಕ್ಷ ರು.ಗಳನ್ನು ನೀಡಲು ಸರ್ಕಾರ ಮೀನಮೇಷ ಎಣಿಸುತ್ತಿರುವ ನಿಟ್ಟಿನಲ್ಲಿ ಅಂದಿನಿಂದ ಇಂದಿನವರವಿಗೂ ನಿರಂತರವಾಗಿ ಹೆದ್ದಾರಿ ತಡೆ ಸೇರಿದಂತೆ ವಿವಿಧ ರೀತಿಯ ಹೋರಾಟಗಳನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದರು.
ರಾಷ್ಟ್ರೀಯ ಹೆದ್ದಾರಿ 7ರಲ್ಲಿನ ಟೋಲಲ್ಪ್ಲಾಜಾ ಬಳಿ ರೈತ ಸಂಘ ಮತ್ತು ರೈತರು ಹೆದ್ದಾರಿ ತಡೆ ನಡೆಸಿದ ಹಿನ್ನೆಲೆಯಲ್ಲಿ ಕೆಲ  ಸಮಯ ವಾಹನ ಸಂಚಾರ ಸ್ಥಗಿತಗೊಂಡಿತು.ರೈತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು. ರೈತ ಮುಖಂಡ ಜಿ. ರಾಮಕೃಷ್ಣಪ್ಪ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.