ಬುದ್ಧ, ಅಂಬೇಡ್ಕರ್ ದಲಿತರ ಕಣ್ಣುಗಳಿದ್ದಂತೆ: ಮನೋರಕ್ಖಿತ
ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ ಡಿ.7
ದಲಿತರ ಪಾಲಿಗೆ ಬುದ್ದ ಬೆಳಕು ನೀಡಿದರೆ, ದಾದಾಸಾಹೇಬ್ ಡಾ. ಅಂಬೇಡ್ಕರ್ ಅವರು ಮಹಾನ್ ಶಕ್ತಿ ನೀಡಿದ ಚೇತನ ಎಂದು ಮಹದೇಶ್ವರ ಕಾಲೇಜಿನ ಪ್ರಾಂಶುಪಾಲ ಬಂತೇಜಿ ಮನೋರಕ್ಖಿತ ಥೇರೊ ಹೇಳಿದರು.
ಭೀಮನಗರದ ಜ್ಞಾನ ಜ್ಯೋತಿ ಬಾಪುಲೆ ಮಂದಿರದಲ್ಲಿ ಅಂಬೇಡ್ಕರ್ 57ನೇ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಮೇಣದ ಬತ್ತಿ ಮೆರವಣಿಗೆ ಕಾರ್ಯಕ್ರಮಕ್ಕೆ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಎಲ್ಲರೂ ಪಂಚಶೀಲ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅಂಬೇಡ್ಕರ್ ತತ್ವ ಹಾಗೂ ಆದರ್ಶ ಗುಣಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಅಂಬೇಡ್ಕರ್ ಹಾಕಿಕೊಟ್ಟ ಹಾದಿಯಲ್ಲಿ ಯುವಪೀಳಿಗೆ ನಡೆಯುವ ಮೂಲಕ ಜೀವನದಲ್ಲಿ ಉತ್ತಮ ವ್ಯಕ್ತಿಗಳಾಗಬೇಕು ಎಂದು ಸಲಹೆ ನೀಡಿದರು.
ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷ ನಟರಾಜು ಮಾತನಾಡಿ, ಭೀಮನಗರದ ಜ್ಯೋತಿಬಾಪುಲೆ ಮಂದಿರದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ವಿಜೃಂಭಣೆಯಿಂದ ಮೇಣದ ಬತ್ತಿಯ ಮೆರವಣಿಗೆ ನಡೆಸುವ ಮೂಲಕ ಆಚರಿಸಲಾಗುತ್ತಿದೆ. ಅಂಬೇಡ್ಕರ್ ಅವರ ಆದರ್ಶ ಗುಣಗಳು ನಮಗೆ ದಾರಿದೀಪಗಳು ಎಂದು ಹೇಳಿದರು.
ಭೀಮನಗರದಿಂದ ಹೊರಟ ಮೆರವಣಿಗೆ ತರಕಾರಿ ಮಾರುಕಟ್ಟೆ ಮೂಲಕ ಸಾಗಿ, ರಾಜಕುಮಾರ್ ರಸ್ತೆ, ಅಂಬೇಡ್ಕರ್ ರಸ್ತೆ, ಎಡಿಬಿ ವೃತ್ತದ ಮೂಲಕ ಬಸವಲಿಂಗಪ್ಪ ಕಾಲೇಜಿಗೆ ತೆರಳಿತು. ಮೆರವಣಿಗೆಯಲ್ಲಿ ಮುಖಂಡರು, ವಿದ್ಯಾರ್ಥಿಗಳು ಮೇಣದ ಬತ್ತಿಯನ್ನು ಹಿಡಿದು ಮೌನವಾಗಿ ಸಾಗಿ ಮೆರವಣಿಗೆಗೆ ಮೆರುಗು ತಂದರು.
ಸಾಹಿತಿ ಶಂಕನಪುರ ಮಹದೇವ, ನಾಗರಿಕ ಸಮಿತಿ ಸಂಸ್ಥಾಪಕ ಕಾರ್ಯದರ್ಶಿ ನಟರಾಜಅರಸು, ಪುಟ್ಟಬುದ್ದಿ, ನಗರಸಭಾಧ್ಯಕ್ಷ ಮಹದೇವಿ, ಸದಸ್ಯ ರಮೇಶ್, ಮುಖಂಡ ಚಂದು, ಮುಳ್ಳೂರು ಶಿವಮಲ್ಲು, ಸಿದ್ದಪ್ಪಾಜಿ, ರಾಚಪ್ಪಾಜಿ ಹಲವು ಗಣ್ಯರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

