ಕೋಲಾರ

ಸಾರಿಗೆ ಅಧಿಕಾರಿಗಳ ಕಿರುಕುಳ; ಖಾಸಗೀ ಬಸ್ ಮಾಲೀಕರ ಆರೋಪ

Published On :

ಚಿಕ್ಕಬಳ್ಳಾಪುರ: ಬಡ್ಡಿಗೆ ತಂದ ಸಾಲದ ಹಣದಲ್ಲಿ ಖಾಸಗಿ ಬಸ್ಸುಗಳನ್ನು ಸಂಚಾರಕ್ಕೆ ಬಿಟ್ಟಿದ್ದು, ಸಾರಿಗೆ ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಅದಿಕಾರಿಗಳು ಕಿರುಕುಳ ನೀಡುತ್ತಿರುವುದರಿಂದ ತೊಂದರೆಯಾಗುತ್ತಿದೆ ಎಂದು ಖಾಸಗಿ ಬಸ್ ಮಾಲೀಕರ ಸಂಘ ಅಳಲು ತೋಡಿಕೊಂಡಿದೆ. ನಗರದ ಹೊರವಲಯದ ಚಿತ್ರಾವತಿ ಆರ್ಯ ವೈಶ್ಯ ಕಲ್ಯಾಣ ಮಂಟಪದಲ್ಲಿ ಮಾತನಾಡಿದ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ವಿಕ್ರಮ್, ಹಿಂದೆ 1968 ರಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮೋಟಾರು ಕಾಯ್ದೆಯನ್ನು ತಿದ್ದುಪಡಿ ಮಾಡಿ ಹೊಸ ಸಾರಿಗೆ ನೀತಿ ಜಾರಿಗೆ ತರಬೇಕೆಂದು ಆಗ್ರಹಿಸಿದರು.
ನೆರೆ ರಾಜ್ಯದಲ್ಲಿ ಶೇ.60 ಸರ್ಕಾರಿ ಬಸ್ ಮತ್ತು ಶೇ.40 ರಷ್ಟು ಖಾಸಗಿ ಬಸ್ಗಳಿಗೆ ಸಂಚರಿಸಲು ಪರವಾನಗಿ ನೀಡಿದ್ದು ಈ ವ್ಯವಸ್ಥೆ ನಮ್ಮ ರಾಜ್ಯದಲ್ಲಿಯೂ ಜಾರಿಗೆ ತರಬೇಕೆಂದು ಒತ್ತಾಯಿಸಿದರು. ಈ ಸಂದರ್ರ್ಭದಲ್ಲಿ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಎಸ್.ಎಂ. ಮಂಜುನಾಥ್, ಉಪಾಧ್ಯಕ್ಷ ಶ್ರೀನಿವಾಸ್, ವೆಂಕಟೇಶ್, ಕಾರ್ಯದರ್ಶಿ ಗೀತೇಶ್, ಖಜಾಂಚಿ ರವಿಕುಮಾರ್, ಮಹಾಕಾಳಿಬಾಬು ಇದ್ದರು.


ಕರ್ತವ್ಯ ಲೋಪ: ಇಬ್ಬರು ಪೊಲೀಸರ ಅಮಾನತು

ಬಂಗಾರಪೇಟೆ: ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಇಲ್ಲಿನ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತುಗೊಳಿಸಿ ಕೆಜಿಎಎಫ್ ಡಾ.ರೋಹಿಣಿ ಕಟೋಚ್ ಆದೇಶ ಹೊರಡಿಸಿದ್ದಾರೆ. ಸಂತೋಷ್ಕುಮಾರ್ ಮತ್ತು ಡಿಆರ್ ಪೇದೆ ಸುದಾಕರ್ ಅಮಾನತು ಶಿಕ್ಷೆಗೆ ಗುರಿಯಾಗಿದ್ದು, ಇತ್ತೀಚೆಗೆ ಪಟ್ಟಣದಲ್ಲಿ ಕಳ್ಳತನ ಡಕಾಯಿತಿ ಪ್ರಕರಣಗಳು ಹೆಚ್ಚಾಗಿದ್ದರಿಂದ ಸಂತೋಷ್ ಕುಮಾರ್ ಮತ್ತು ಸುಧಾಕರ್ ಇಬ್ಬರು ಪೇದೆಗಳನ್ನು ಎಪಿಎಂಸಿ ಯಾರ್ಡ್ ಬಳಿ ಇರುವ ಚೆಕ್ಪೋಸ್ಟ್ನಲ್ಲಿ ಕರ್ತವ್ಯಕ್ಕೆ ನಿಯೋಜಿಸಿ ರಾತ್ರಿ ವೇಳೆ ಬಂದು ಹೋಗುವ ವಾಹನಗಳನ್ನು ತಪಾಸಣೆ ಮಾಡುವಂತೆ ಸೂಚಿಸಲಾಗಿತ್ತು. ಕರ್ತವ್ಯಕ್ಕೆ ಹಾಜರಾಗಿದ್ದ ಪೇದೆಗಳು ರಾತ್ರಿ ವೇಳೆ ಕರ್ತವ್ಯ ಮಾಡದೆ ಕಾಲಹರಣ ಮಾಡಿ ಕರ್ತವ್ಯಕ್ಕೆ ಚ್ಯುತಿ ಬರುವಂತೆ ಮಾಡಿದ್ದರು. ಅಂದು ಪೊಲೀಸ್ಸಬ್ಇನ್ಸಪೆಕ್ಟರ್ ಪರಿಶೀಲಿಸಿದಾಗ ಇಬ್ಬರು ಪೇದೆಗಳು ಸ್ಥಳದಲ್ಲಿರದೆ ಕರ್ತವ್ಯ ಲೋಪ ಎಸಗಿದ್ದರು. ಈ ಹಿನ್ನೆಲೆಯಲ್ಲಿ ಠಾಣಾಧಿಕಾರಿ ಯೋಗಾನಂದ ಸೋನಾರ್ ಎಸ್ಪಿ ಡಾ.ರೋಹಿಣಿ ಕಟೋಚ್ ಅವರಿಗೆ ವರದಿ ಸಲ್ಲಿಸಿದ್ದರು. ಈ ವರದಿ ಆಧಾರದ ಮೇಲೆ ಶನಿವಾರ ಎಸ್ಪಿರವರು ಇಬ್ಬರನ್ನು ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.



ವಿದ್ಯಾರ್ಥಿನಿ ಆತ್ಮಹತ್ಯೆ
ಬಂಗಾರಪೇಟೆ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ನೊಂದು ಪ್ರಥಮ ಬಿಎ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ತಾಲೂಕಿನ ಮಡಿವಾಳ ಗ್ರಾಮದ ಶ್ರೀನಿವಾಸ್ ಎಂಬುವರ ಮಗಳಾದ ಸಂಪ್ರೀತಿ 18 ಎಂಬಾಕೆಯ ಸಾವಿಗೆ ಶರಣಾಗಿದ್ದು, ಈಕೆ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಮಥ ಬಿಎ ಓದುತ್ತಿದ್ದಳು ಪ್ರಮಥ ಸೆಮಿಸ್ಟರ್ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದಿದೆ ಎಂದು ನೊಂದಿದ್ದಳು ಎನ್ನಲಾಗಿದೆ. ಶನಿವಾರ ಗ್ರಾಮದ ಹೊರವಲಯದಲ್ಲಿರುವ ಬಾವಿಯಲ್ಲಿ ಸಂಪ್ರೀತಿ ಶವ ಪತ್ತೆಯಾಗಿದೆ.ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.  
ಪ್ರತಿಭಾ ಕಾರಂಜಿ ಕಾರ್ಯಕ್ರಮ
ಶಿಡ್ಲಘಟ್ಟ: ತಾಲೂಕಿನ ಚಿಕ್ಕದಾಸರಹಳ್ಳಿಯ ಲಕ್ಷ್ಮೀ ವಿದ್ಯಾನಿಕೇತನ ಶಾಲೆಯಲ್ಲಿ ಗುರುವಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಆಯೋಜಿಸಲಾಗಿತ್ತು. ತುಮ್ಮನಹಳ್ಳಿ ಕ್ಲಸ್ಟರ್ನ ಹದಿನೈದು ಶಾಲೆಗಳ ಸುಮಾರು ಮುನ್ನೂರು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಕ್ಲೇ ಮಾಡಲಿಂಗ್, ಕಂಠಪಾಠ ಸ್ಪರ್ಧೆ ಮತ್ತಿತರ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಮಕ್ಕಳಲ್ಲಿನ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಯಲ್ಲಿ ಪ್ರತಿಯೊಬ್ಬ ಮಗುವೂ ಭಾಗವಹಿಸಬೇಕು ಎಂದು ಸಮನ್ವಯಾಧಿಕಾರಿ ಸುಮಾ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.