ರಾಷ್ಟ್ರೀಯ ಭದ್ರತೆ, ಸುರಕ್ಷತೆಗೆ ಬಿಜೆಪಿ ಬೆಂಬಲಿಸಿ: ಪರೀಕ್ಷಿತ್
ಚಾಮರಾಜನಗರ: ರಾಷ್ಟ್ರೀಯ ಭದ್ರತೆ ಹಾಗೂ ಸುರಕ್ಷತೆಗಾಗಿ ಬಿಜೆಪಿಯನ್ನು ಯುವ ಜನಾಂಗ ಬೆಂಬಲಿಸಬೇಕಾಗಿದೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಪರೀಕ್ಷಿತ್ರಾಜ ಅರಸ್ ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ತಾಲೂಕು ಗ್ರಾಮಾಂತರ ಯುವ ಮೋರ್ಚಾ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ನಿಂದ ಬಲಿಷ್ಟ ದೇಶ ನಿರ್ಮಾಣ ಮಾಡಲು ಸಾಧ್ಯವಾಗುತ್ತಿಲ್ಲ. ಕೇವಲ ಓಟ್ ಬ್ಯಾಂಕ್ ರಾಜಕಾರಣ ಮಾಡುವ ಮೂಲಕ ದೇಶದ ಅಂತರಿಕ ಹಾಗೂ ಆರ್ಥಿಕ ಅಭದ್ರತೆಗೆ ಕಾಂಗ್ರೆಸ್ ಕಾರಣವಾಗುತ್ತಿದೆ ಎಂದು ಟೀಕಿಸಿದರು.
ಡಿ. 25 ರಂದು ವಾಜಪೇಯಿ ಜನ್ಮ ದಿನವನ್ನು ಯುವ ಮೋರ್ಚಾದಿಂದ ಶ್ರಮದಾನ ದಿನವನ್ನಾಗಿ ಆಚರಿಸಲಾಗುತ್ತದೆ. 150ನೇ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಯುವ ಸಮಾವೇಶ ಹಾಗೂ ಯುವಶಕ್ತಿಯನ್ನು ಜಾಗೃತಗೊಳಿಸಲು ಜನವರಿಯಲ್ಲಿ ಯುವ ಚಿಂತನಾ ಯಾತ್ರೆಯನ್ನು ಕೈಗೊಳ್ಳಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಾಲಸುಬ್ರಮಣ್ಯ ಮಾತನಾಡಿದರು. ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಎಂ. ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ನೂರೊಂದುಶೆಟ್ಟಿ, ತಾಲೂಕು ಅಧ್ಯಕ್ಷ ಆರ್. ಮಹದೇವ, ನಗರ ಘಟಕದ ಅಧ್ಯಕ್ಷ ಶಿವಣ್ಣ, ನಗರಸಭಾ ಸದಸ್ಯ ರಾಜೇಶ್, ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಮಹದೇಶ್ವರ, ಲಿಂಗರಾಜು, ಉಮೇಶ್, ಪ್ರಥ್ವಿರಾಜ್, ಪುರುಷೋತ್ತಮ್, ಮಂಜುನಾಥ್, ಬಸವಣ್ಣ, ರವೀಶ್ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

