ಕೋಲಾರ

ಶಿಕ್ಷಕರ ಬೇಡಿಕೆ ಈಡೇರಿಸುವ ಭರವಸೆ

Published On :

ಕೋಲಾರ: ಶಿಕ್ಷಕರ ಸೇವಾ ಬಡ್ತಿ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಭರವಸೆ ನೀಡಿದ ಹಿನ್ನಲೆಯಲ್ಲಿ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟಶಿವಪ್ಪ ತಿಳಿಸಿದ್ದಾರೆ.
ವಿವಿಧ ಬೇಡಿಕೆ ಈಡೇರಿಸಲು ಮತ್ತು ಬಿಇಒ ಕಚೇರಿಯಿಂದ ನಾಪತ್ತೆಯಾಗಿರುವ ಎಸ್.ಆರ್. ಗಳನ್ನು ಕಚೇರಿಗೆ ತರಿಸಿಕೊಳ್ಳುವಂತೆ ಒತ್ತಾಯಿಸಿ ಶನಿವಾರ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಬಿಇಒ ಅವರು  ಶಿಕ್ಷಕರ ಸಂಘದ ಪ್ರತಿನಿಧಿಗಳೊಂದಿಗೆ ನಡೆಸಿದ ಮಾತುಕತೆ ನಂತರ ಧರಣಿ ಸದ್ಯಕ್ಕೆ ಕೈಬಿಟ್ಟಿರುವುದಾಗಿ ತಿಳಿಸಿದ್ದಾರೆ.
ಶಿಕ್ಷಕರ ಸೇವಾ ಪುಸ್ತಕಗಳನ್ನು ಕೂಡಲೇ ತರಿಸುವುದಾಗಿ ಬಿಇಒ ಅವರು ಖಚಿತ ಭರವಸೆ ನೀಡಿದ್ದಾರೆ. ಅದೇ ರೀತಿ ಶಿಕ್ಷಕರಿಗೆ ಕಾಲಕಾಲಕ್ಕೆ ನೀಡಬೇಕಾದ ಬಡ್ತಿ ಮತ್ತು ಬಾಕಿ ಹಣವನ್ನು ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಶಿಕ್ಷಕರು ಅಥವಾ ಸಂಘದ ಪ್ರತಿನಿಧಿಗಳನ್ನು ವೇತನ ಮತ್ತಿತರ ಬಿಲ್ಗಳ ಪಾವತಿಗಾಗಿ ಖಜಾನೆಗೆ ಕಳುಹಿಸಬಾರದು, ಈ ಕಾರ್ಯ ಇಲಾಖೆಯ ಗುಮಾಸ್ತರೇ ನಿರ್ವಹಿಸಬೇಕು ಎಂಬುದು, ವೇತನ ಬಿಲ್ಲುಗಳನ್ನು ಪ್ರತಿ ತಿಂಗಳ 25 ರೊಳಗೆ ಸಿದ್ದಗೊಳಿಸಬೇಕು, 30ರೊಳಗೆ ಖಜಾನೆಗೆ ಸಲ್ಲಿಸಬೇಕು ಎಂಬ ಬೇಡಿಕೆಗೂ ಬಿಇಒ ಅವರು ಒಪ್ಪಿಗೆ ಸೂಚಿಸಿದ್ದಾರೆಂದು ವೆಂಕಟಶಿವಪ್ಪ ತಿಳಿಸಿದ್ದಾರೆ.
ವೈದ್ಯಕೀಯ ವೆಚ್ಚದ  ಮರುಪಾವತಿ ಬಿಲ್ಲುಗಳನ್ನು ತಯಾರಿಸಿಟ್ಟುಕೊಳ್ಳುವುದು, ಖಜಾನೆ ಟೋಕನ್ ಅವ್ಯವಸ್ಥೆ ಸರಿಪಡಿಸುವುದು, ಬಿಸಿಯೂಟ, ಮತಗಟ್ಟೆ ಅಧಿಕಾರಿಗಳಾಗಿ ಕಾರ್ಯನಿರ್ವಹಣೆಗೆ ಸಂಬಂಧಿಸಿದ ರಜಾ ದಿನಗಳನ್ನು ಸೇವಾ ಪುಸ್ತಕದಲ್ಲಿ ನಮೂದಿಸಬೇಕು ಮತ್ತಿತರ ಬೇಡಿಕೆಗಳನ್ನು ಈಡೇರಿಸುವ ಸ್ವಷ್ಟ ಭರವಸೆ ನೀಡಿರುವ ಹಿನ್ನಲೆಯಲ್ಲಿ ಶಿಕ್ಷಕರ ಸಂಘದಿಂದ ಶನಿವಾರ ಬೆಳಗ್ಗೆ ನಡೆಸಲು ಉದ್ದೇಶಿಸಿದ್ದ ಧರಣಿಯನ್ನು ತಾತ್ಕಾಲಿಕವಾಗಿ ಕೈಬಿಡಲಾಗಿದೆ ಎಂದು ವೆಂಕಟಶಿವಪ್ಪ ತಿಳಿಸಿದ್ದಾರೆ.
ಶಿಕ್ಷಕರ ಸಂಘದ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಬಿಇಒ ಬಿ. ಜಗದೀಶ್, ಶಿಕ್ಷಕರ ಸಮಸ್ಯೆಗಳ ನಿವಾರಣೆ ನನ್ನ ಹೊಣೆಯಾಗಿದ್ದು, ನಾನು ಕೆಲವು ದಿನಗಳ ಹಿಂದಷ್ಟೇ ಇಲ್ಲಿ ಅಧಿಕಾರಿಯಾಗಿ ಬಂದಿದ್ದು, ಹಂತಹಂತವಾಗಿ ಭರವಸೆ ಈಡೇರಿಸುವುದಾಗಿ ತಿಳಿಸಿದ ನಂತರ ಧರಣಿ ಹಿಂದಕ್ಕೆ ಪಡೆಯಲಾಗಿದೆ.
ಬಿಇಒ ಅವರೊಂದಿಗೆ ನಡೆಸಿದ ಸಭೆಯಲ್ಲಿ ಶಿಕ್ಷಕರ ಸಂಘದ ರಾಜ್ಯ ಪರಿಷತ್ ಸದಸ್ಯ ನಾಗರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಶಿವಪ್ಪ, ಎಂ.ಎನ್. ಶ್ರೀನಿವಾಸಮೂರ್ತಿ, ಖಾದರ್ ಇಲಾಹಿ, ಎಂ. ಶ್ರೀರಾಂ, ಕೆ.ಟಿ. ನಾಗರಾಜ್, ವಿ. ರಾಮಚಂದ್ರಪ್ಪ, ಕೆ.ಎಲ್. ಶ್ರೀನಿವಾಸ್, ಎ.ನಾರಾಯಣಸ್ವಾಮಿ, ವಿಜಯಕುಮಾರ್, ಅಸ್ಲಾಂಪಾಷ, ಬೆಟ್ಟದ ನಾರಾಯಣಸ್ವಾಮಿ, ವೇಮಗಲ್ ಮುನಿರಾಜ್, ಚಂದ್ರಪ್ಪ, ಕ್ಯಾಲನೂರು ಶ್ರೀನಿವಾಸ್, ನಾರಾಯಣಸ್ವಾಮಿ ಇದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.