ಆದಿ ಶ್ರೀ ಸಂಸ್ಮರಣೆ
ಕೋಲಾರ: ಚಿಕ್ಕಬಳ್ಳಾಪುರದಲ್ಲಿ ಡಿ.15 ರಂದು ನಡೆಯಲಿರುವ ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧಿಪತಿ ದಿವಂಗತ ಶ್ರೀ ಬಾಲಗಂಗಾಧರನಾಥಸ್ವಾಮೀಜಿಯವರ ಗುರುಸಂಸ್ಮರಣೆ ಕಾರ್ಯಕ್ರಮಕ್ಕೆ ಭಕ್ತರನ್ನು ಕರೆದೊಯ್ಯಲು ವಕ್ಕಲಿಗರ ಸಂಘದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ನಗರದ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ನಿರ್ಮಲಾನಂಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂಬ ಉದ್ದೇಶದಿಂದ ಕಾರ್ಯಕ್ರಮಕ್ಕೆ ಭಕ್ತರನ್ನು ಕರೆದುಕೊಂಡು ಹೋಗಲು ಉಚಿತ ಬಸ್ ವ್ಯವಸ್ಥೆ ಮಾಡಲು ಭಾನುವಾರ ನಡೆದ ಕೋಲಾರ ಜಿಲ್ಲಾ ಒಕ್ಕಲಿಗರ ಸಂಘದ ಸಭೆಯಲ್ಲಿ ತೀರ್ಮಾನಿಲಾಯಿತು. ಶ್ರೀ ಬಾಲಗಂಗಾಧರನಾಥಸ್ವಾಮೀಜಿಯವರ ಗುರುಸಂಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದರಿಂದ ವಕ್ಕಲಿಗ ಸಂಘದ ಮುಖಂಡರು ಪೂರ್ವಭಾವಿ ಸಭೆ ನಡೆಸಿ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಕೆ.ವಿ. ಶಂಕರಪ್ಪ, ಡಾ.ಕೆ.ಎಂ. ಮೌನಿ, ಉಪಾಧ್ಯಕ್ಷ ವಿ. ಕೃಷ್ಣಾರೆಡ್ಡಿ, ನಿರ್ದೇಶಕರಾದ ಉರಿಗಿಲಿ ರುದ್ರಸ್ವಾಮಿ, ಎಸ್.ಆರ್. ಮುರಳಿಗೌಡ, ಡಿ. ವೆಂಕಟರಾಮೇಗೌಡ, ಡಿ. ಕೃಷ್ಣಪ್ಪ, ವೀರವೆಂಕಟಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

