ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿ
ಬಂಗಾರಪೇಟೆ; ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ ಉಂಟಾಗಿದ್ದು, ಮುಂದಿನ ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಿದೆ ಎಂದು ಮಾಜಿ ಶಾಸಕ ಎಂ. ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ಕುವೆಂಪು ವೃತ್ತದಲ್ಲಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸಿರುವುದಕ್ಕೆ ಬಿಜೆಪಿ ಕಾರ್ಯಕರ್ತರು ಮಾಜಿ ಶಾಸಕ ಎಂ. ನಾರಾಯಣಸ್ವಾಮಿ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದ ನಂತರ ಅವರು ಮಾತನಾಡಿದರು.
ಪಕ್ಷದ ತಾಲೂಕು ಅಧ್ಯಕ್ಷ ಮಾರ್ಕಂಡೇಗೌಡ, ಯುವ ಮೋರ್ಚಾ ಅಧ್ಯಕ್ಷ ಲಕ್ಷ್ಮಯ್ಯಗೌಡ, ಪುರಸಭೆ ಸದಸ್ಯ ಬಿ.ಸಿ. ಮೂರ್ತಿ, ವೇದಾವತಿಪ್ರಭಾಕರ್, ಭೂ ಬ್ಯಾಂಕಿನ ಅಧ್ಯಕ್ಷ ವೆಂಕಟೇಶ್, ಕೀಲುಕುಪ್ಪ ಶ್ರೀನಿವಾಸ್, ನಾಗಪ್ರಕಾಶ್, ನಗರ ಅಧ್ಯಕ್ಷ ರಮೇಶ್, ಅಮರೇಶ್, ಕಣಿಂಬೆಲೆ ಶ್ರೀನಿವಾಸ್ ಇತರರು ಇದ್ದರು.
ಮಾಲೂರಲ್ಲೂ
ಮಾಲೂರು: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಬಹುಮತಗಳಿಸಿರುವ ಹಿನ್ನೆಲೆಯಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಭಾನುವಾರ ವಿಜೆಯೋತ್ಸವ ಆಚರಿಸಿದರು. ಪಟ್ಟಣದ ಮಾರಿಕಾಂಭ ಮಹಾದ್ವಾರದ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ತಾಲೂಕು ಅಧ್ಯಕ್ಷ ಸೂ. ವೆಂಕಟೇಶ್ ಮಾತನಾಡಿದರು. ರಾಮೇಗೌಡ, ಪುರಸಭೆ ಸದಸ್ಯ ರಾಮಮೂರ್ತಿ, ಸಿ.ಪಿ. ನಾಗರಾಜ್, ರಮೇಶ್ ಮಾತನಾಡಿದರು. ಆರ್. ವೆಂಕಟೇಶ್, ಶೇಷಾದ್ರಿ, ಸಾಬೂಸಾಬ್, ದಿನೇಶ್ಗೌಡ, ಗೋಪಾಲ್ ಇದ್ದರು.
ಕಾರ್ಯಕರ್ತರ ಹರ್ಷ
ಮುಳಬಾಗಲು: ರಾಷ್ಟ್ರದ ನಾಲ್ಕು ರಾಜ್ಯಗಳ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದ ಟಿಎಪಿಸಿಎಂಎಸ್ ವೃತ್ತದ ಬಳಿ ಭಾನುವಾರ ಬಿಜಿಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು. ಬಿಜೆಪಿ ಮುಖಂಡ ವೈ. ಸುರೇಂದ್ರಗೌಡ ಮಾತನಾಡಿದರು. ಅತ್ತಿಪಲ್ಲಿ ವೆಂಕಟರವಣ, ಸೊನ್ನವಾಡಿ ಮುನಿರಾಜು, ಎಚ್.ಎಸ್. ಹರೀಶ್, ಸಿ.ಕೆ. ರಾಧವಲ್ಲಭ,ಶ್ರೀರಾಮಯ್ಯ, ಕೆ.ಎಸ್. ನಾಗೇಶ್ ಬಾಬು ಭಾಗವಹಿಸಿದ್ದರು.
ವಿಜಯೋತ್ಸವ
ಶಿಡ್ಲಘಟ್ಟ: ಉತ್ತರ ಭಾರತದ ಚುನಾವಣೆಗಳಲ್ಲಿ ಬಿಜೆಪಿ ಜಯಗಳಿಸಿದ್ದು, ಪಟ್ಟಣದ ಕೋಟೆ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚುವುದರ ಮೂಲಕ ವಿಜಯೋತ್ಸವ ಆಚರಿಸಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಸುರೇಂದ್ರ ಗೌಡ, ಜಿಲ್ಲಾ ಪ್ರದಾನ ಕಾರ್ಯದರ್ಶಿ ರಮೇಶ್ ಬಾಯಿರಿ, ಪ್ರದಾನ ಕಾರ್ಯದರ್ಶಿಗಳಾದ ರಾಘವೇಂದ್ರ, ಶ್ರೀದರ್, ಹಾಗೂ ದಾಮೋದರ್, ಖಂಡೇರಾವ್, ತ್ಯಾಗರಾಜ್, ಮುನಿರತ್ನಮ್ಮ, ರತ್ಮಮ್ಮ ಪಾಲ್ಗೂಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

