ಸವಲತ್ತು ಒದಗಿಸದ ವಾರ್ಡನ್ಗಳಿಗೆ ಎಚ್ಚರಿಕೆ
ಚಿಂತಾಮಣಿ: ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳಿಗೆ ಮೂಲ ಸೌಲಭ್ಯಗಳ ಕೊರತೆಯಿಂದ ಶೈಕ್ಷಣಿಕ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ವಾರ್ಡನ್ಗಳಿಗೆ ಅಧಿಕಾರಿಗಳು ತರಾಟೆಗೆ ತೆಗೆದುಕೊಂಡ ಘಟನೆ ಶುಕ್ರವಾರ ನಡೆದ ಸಭೆಯಲ್ಲಿ ನಡೆಯಿತು.
ನಗರದ ತಾಪಂ ಸಭಾಂಗಣದಲ್ಲಿ ನಡೆದ ತಾಲೂಕು ಸಮಾಜ ಕಲ್ಯಾಣ, ಹಿಂದುಳಿದ ಮತ್ತು ಅಲ್ಪ ಸಂಖ್ಯಾತರ ಇಲಾಖೆಯ ವಿವಿಧ ಹಾಸ್ಟೆಲ್ಗಳ ಮೇಲ್ವಿಚಾರಕರ ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಪಂ ಅಧ್ಯಕ್ಷಿಣಿ ಗೌರಮ್ಮ ನಾಗೇಶ್ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಂತೃಪ್ತಿ ವ್ಯಕ್ತಪಡಿಸಿದರು.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ತಾಲೂಕಿನ 18 ಹಾಸ್ಟೆಲ್ ಮತ್ತು ಬಿಸಿಎಂ ಇಲಾಖೆಗೆ ಒಳಪಡುವ 12 ಹಾಸ್ಟೆಲ್ಗಳಲ್ಲಿ ಬಯೋವುಟ್ರಿಕ್ ಪದ್ಧತಿ ಅಳವಡಿಸಿದ್ದರೂ ವಾರ್ಡನ್ಗಳ ನಿರ್ಲಕ್ಷ್ಯದಿಂದ ಕಾರ್ಯರೂಪಕ್ಕೆ ಬರದೇ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಊಟ, ತಿಂಡಿ ದೊರೆಯುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಹಲವು ಹಾಸ್ಟೆಲ್ಗಳಲ್ಲಿ ಪ್ರತಿಭಟನೆಗೆ ಮುಂದಾದಾಗ ಅವರ ಮೇಲೆ ವಾರ್ಡನ್ಗಳು ಮದ್ಯವರ್ತಿಗಳ ಮುಖಾಂತರ ದೌರ್ಜನ್ಯ ನಡೆಸುತ್ತಿರುವ ಆರೋಪಗಳೂ ಸಭೆಯಲ್ಲಿ ಚರ್ಚೆಯಾಯಿತು. ತಾಲೂಕಿನ ಮುರುಗಮಲ್ಲ, ಕೆ. ರಾಗುಟ್ಟಹಳ್ಳಿ, ದೊಡ್ಡಬೊಮ್ಮನಹಳ್ಳಿ, ಆನೂರು ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದ್ದರೂ ಹಾಜರಾತಿ ಪುಸ್ತಕದಲ್ಲಿ ಮೇಲ್ವಿಚಾರಕರೆ ಸಹಿ ಮಾಡಿ ಸರ್ಕಾರದ ಹಣ ಗುಳುಂ ಮಾಡಿ ಅಧಿಕಾರಿಗಳನ್ನು ವಂಚನೆ ಮಾಡುತ್ತಿರುವುದಾಗಿ ತಾಪಂ ಕಾರ್ಯನಿರ್ವಹಣಾಧಿಕಾರಿ ವಸಂತ್ ಕುಮಾರ್ ಹಾಗೂ ಅಧ್ಯಕ್ಷೆ ಗೌರಮ್ಮ ವಾರ್ಡನ್ಗಳಾದ ರೆಡ್ಡೆಪ್ಪ, ಸುಧಾಕರ್, ಮಂಜುಳ, ಉಮೇಶ್ರ ಬೆವರಿಳಿಸಿದರು. ಮುಂದಿನ ದಿನಗಳಲ್ಲಿ ಹಾಸ್ಟೆಲ್ಗಳಲ್ಲಿ ಸ್ವಚ್ಛತೆ ಹಾಗೂ ಬಯೋವುಟ್ರಿಕ್ ಪದ್ಧತಿ ಪ್ರಕಾರ ಪ್ರತಿ ವಿದ್ಯಾರ್ಥಿಗೂ ಶುಚಿ-ರುಚಿಯಾದ ಊಟ ಮತ್ತಿತರೆ ಸವಲತ್ತುಗಳನ್ನು ವಿದ್ಯಾರ್ಥಿಗಳಿಗೆ ನೀಡದೆ ವಂಚಿಸುವ ವಾರ್ಡನ್ಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದೆಂದು ಅಧಿಕಾರಿಗಳು ಎಚ್ಚರಿಸಿದರು. ತಾಪಂ ಮಾಜಿ ಅಧ್ಯಕ್ಷ ಶೇಖರ್ ಬಾಬು, ವ್ಯವಸ್ಥಾಪಕ ಕೃಷ್ಣಪ್ಪ ಸೇರಿದಂತೆ ತಾಲೂಕಿನ ವ್ಯಾಪ್ತಿಯ ಮೇಲ್ವಿಚಾರಕರು ಸಭೆಯಲ್ಲಿ ಭಾಗವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

