ಕೋಲಾರ

ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಅಗತ್ಯ

Published On :

ಟೇಕಲ್: ಪ್ರಾಥಮಿಕ ಹಂತದಲ್ಲಿ ಎಲ್ಲಾ ಮಕ್ಕಳಿಗೂ ಗುಣಾತ್ಮಕ ಶಿಕ್ಷಣ ನೀಡಬೇಕು ಎಂದು ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕ ದೇವಛಪ್ರಕಾಶ್ ತಿಳಿಸಿದರು.
ಟೇಕಲ್‌ನ ಯಲುವಗುಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಜೀರ್ಣೋದ್ಧಾರ ಮತ್ತು ವಿದ್ಯಾ ಗಣಪತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಶಾಲೆ ಬಿಟ್ಟ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಬರುವಂತೆ ಮಾಡಬೇಕು ಎಂದರು. ಶಿಕ್ಷಕರಿಗೂ ಉನ್ನತ ವ್ಯಾಸಂಗಕ್ಕಾಗಿ ಇಲಾಖೆಯಲ್ಲಿ ಹಂತ ಹಂತವಾದ ಯೋಜನೆಗಳನ್ನು ರೂಪಿಸಿದ್ದು ಇದರ ಸೌಲಭ್ಯ ಪಡೆಯಬಹುದೆಂದರು. ಯಲುವಗುಳಿ ಶಾಲೆ ಗ್ರಾಮಸ್ಥರ ಸಹಕಾರದಿಂದ ಎರಡು ಲಕ್ಷ ವೆಚ್ಚದಲ್ಲಿ ದುರಸ್ತಿ ಮಾಡುವುದರ ಮೂಲಕ ಶಾಲೆ ವಾತಾವರಣ ಉತ್ತಮವಾಗಿದೆ ಎಂದರು. ವಿಷಯ ಪರಿವೀಕ್ಷಕ ಅಶೋಕ್, ಎ.ಕೆ. ವೆಂಕಟೇಶ್‌ರನ್ನು ಸನ್ಮಾನಿಸಲಾಯಿತು. ಗ್ರಾಮಸ್ಥರಿಂದ ಮುಖ್ಯೋಪಾಧ್ಯಾಯ ವೈ.ಕೆ. ರವಿಂದ್ರರವರನ್ನು ಸನ್ಮಾನಿಸಲಾಯಿತು. ವೀರಭದ್ರಯ್ಯ, ಮಂಜಪ್ಪ, ಸಂಪಂಗಿ, ಶಶಿಧರ್, ಶ್ಯಾಮಣ್ಣ, ನಾರಾಯಣಸ್ವಾಮಿ, ಆರ್. ರಾಜಣ್ಣ, ಗೋಪಾಲ್‌ರಾವ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.