ಕರ್ನಾಟಕ ರಕ್ಷಣಾ ವೇದಿಕೆ ಬೈಕ್ ರ್ಯಾಲಿಗೆ ಚಾಲನೆ
ಕ.ಪ್ರ.ವಾರ್ತೆ , ಮಾಲೂರು , ಡಿ.9
ಅಭಿವೃದ್ಧಿ ಕಾರ್ಯಗಳ ಕಡೆ ಜನಪ್ರತಿನಿಧಿಗಳು ನಿರ್ಲಕ್ಷ ವಹಿಸಿದಾಗ ಕನ್ನಡ ಪರ ಸಂಘಟನೆಗಳು ಹೋರಾಟ ಮೂಲಕ ಎಚ್ಚರಿಸುವ ಕಾರ್ಯ ಮಾಡಬೇಕಾಗಿದೆ ಎಂದು ಕರವೇ ತಾಲೂಕು ಅಧ್ಯಕ್ಷ ರಾಮಕೃಷ್ಣಪ್ಪ ಹೇಳಿದರು.
ತಾಲೂಕಿನ ಮೂಲಭೂತ ಸೌಕರ್ಯಗಳ ಕೊರತೆಯ ನಿವಾರಣೆಗೆ ಒತ್ತಾಯಿಸಿ ಮಾಲೂರಿನಿಂದ ಕೋಲಾರ ಜಿಲ್ಲಾಧಿಕಾರಿ ಕಚೇರಿವರೆಗೆ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಗೆ ಪಟ್ಟಣದ ಮಹಾರಾಜ ವೃತ್ತದಲ್ಲಿ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.
ಪಟ್ಟಣದ ರಸ್ತೆ ಸೇರಿದಂತೆ ತಾಲೂಕಿನ ರಸ್ತೆಗಳು ಸಂಪೂರ್ಣ ಹದಗೆಟ್ಟಿದೆ. ಅನೇಕ ಹಳ್ಳಿಗಳಲ್ಲಿ ಮನೆಗಳಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲದ ನೈಮರ್ಲ್ಯದ ಕೊರತೆ ಎದ್ದು ಕಾಣುತ್ತಿದೆ. ಹೆಚ್ಚು ಕಾರ್ಖಾನೆಗಳ ಮಾಲೂರು ಪಟ್ಟಣದಲ್ಲಿ ಅಗ್ನಿ ಶಾಮಕದಳ ಕಟ್ಟಡ ಕಾಮಗಾರಿ ಪೂರ್ಣವಾಗಿದ್ದರೂ ಇದುವರೆಗೂ ಉದ್ಘಾಟನೆಯಾಗಿಲ್ಲ. ಮಿನಿ ವಿಧಾನ ಸೌಧ ಹಾಗೂ ಬಸ್ ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಇಲ್ಲ. ಮೂಲಭೂತ ಸೌಕರ್ಯಗಳ ಕೊರತೆಯಿದ್ದರೂ ಜನಪ್ರತಿನಿಧಿಗಳು ಇತ್ತ ಗಮನ ನೀಡದಿರುವುದು ಖಂಡನೀಯ ಎಂದರು.
ತಾಲೂಕಿನಲ್ಲಿ ಕಾಡುತ್ತಿರುವ ಸಮಸ್ಯೆಗಳನ್ನು ಶೀಘ್ರವಾಗಿ ಬಗೆ ಹರಿಸಬೇಕೆಂದು ಒತ್ತಾಯಿಸಲು ಕೋಲಾರ ಜಿಲ್ಲಾಧಿಕಾರಿಗೆ ಮನವಿ ಪತ್ರ ಅರ್ಪಿಸಲು ಬೈಕ್ ರ್ಯಾಲಿ ತೆರಳುತ್ತಿದ್ದು, ಒಂದು ವೇಳೆ ಜಿಲ್ಲಾಧಿಕಾರಿಗಳು ಈ ಸಂಬಂಧ ನಿರ್ಲಕ್ಷ ತೋರಿದರೆ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಹಂತಹಂತವಾಗಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿ ಗೈರು ಹಾಜರಿಯಲ್ಲಿ ಮನವಿ ಪತ್ರ ಅರ್ಪಿಸಿದರು. ಸಂಘದ ಜಿಲ್ಲಾ ಗೌರವಾಧ್ಯಕ್ಷ ಕಲಾವಿದ ಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಚಂಬೆ ರಾಜೇಶ್, ಉಪಾಧ್ಯಕ್ಷ ಟೇಕಲ್ ಶ್ರೀರಾಮುಲು, ದಿನೇಶ್‌ಗೌಡ, ಕೊಪ್ಪಚಂದ್ರು, ಶಿವಾರ ನಾಣಿ, ಕಡತೂರು ಮಂಜು,ಚಲಪತಿ, ಆನಂದ್ ಸೇರಿದಂತೆ 50ಕ್ಕೂ ಹೆಚ್ಚು ಬೈಕ್ ಸವಾರರು ರ್ಯಾಲಿಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

