ಕೋಲಾರ

ಕಸದಿಂದ ನಾರುತ್ತಿರುವ ನಗರ

Published On :

ಚಿಂತಾಮಣಿ: ಕಸ ವಿಲೇವಾರಿ ಮಾಡದೆ ನಗರಸಭೆ ಅಧಿಕಾರಿಗಳು ಜನರ ತಾಳ್ಮೆ ಪರೀಕ್ಷಿಸುತ್ತಿರುವುದರ ವಿರುದ್ಧ ನಾಗರಿಕರು ನಗರಸಭೆ ಅಧಿಕಾರಿಗಳಿಗೆ ಶಾಪ ಹಾಕುತ್ತಿದ್ದಾರೆ.
ನಗರದ ಆಜಾದ್ ಚೌಕ, ಶ್ರೀ ಹರಿಹರೇಶ್ವರ ಸ್ವಾಮಿ ದೇವಾಲಯ ಹಿಂಭಾಗದಲ್ಲಿ ರಾಶಿ ರಾಶಿ ಕಸ ತುಂಬಿ ನಾರುತ್ತಿದ್ದರೂ ನಗರಸಭೆ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ. 'ನಮ್ಮ ಚಿಂತಾಮಣಿ ಸ್ವಚ್ಛ ಚಿಂತಾಮಣಿ' ಎಂಬ ದ್ಯೇಯ ನಾಮಫಲಕಗಳಿಗೆ ಮಾತ್ರ ಸೀಮಿತವಾಗಿದೆ. ಹಂದಿ, ನಾಯಿಗಳು ಗುಂಪುಗಳಾಗಿ ತಿರುಗಾಡುತ್ತಾ ಈ ಭಾಗದ ಜನರಿಗೆ ಕಿರಿ ಕಿರಿ ಉಂಟು ಮಾಡುತ್ತಿವೆ ಎಂದು ನಾಗರಿಕರು ಆರೋಪಿಸಿದ್ದಾರೆ.
ನಗರ ಸ್ವಚ್ಛತೆಗೆ ಸರ್ಕಾರ ಕೋಟ್ಯಂತರ ರುಪಾಯಿ ನಗರಸಭೆಗೆ ಅನುದಾನ ಒದಗಿಸಿದ್ದರೂ ಅಧಿಕಾರಿಗಳು ಸ್ವಚ್ಛತೆ ಕಾಪಾಡುವಲ್ಲಿ ವಿಫಲವಾಗಿದ್ದಾರೆ. ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ನಗರಸಭೆ ದೂರವಾಣಿಗೆ ಸಂಪರ್ಕಿಸಿ ಎಂದು ಹೇಳುತ್ತಿದ್ದಾರೆ ಹೊರತು ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ನಗರಸಭೆ ಅಧಿಕಾರಿಗಳು ವಿಫಲಗೊಂಡಿದ್ದಾರೆಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಸಾಂಕ್ರಾಮಿಕ ರೋಗಗಳ ಭೀತಿ: ನಗರದ ವಿವಿಧ ಬಡಾವಣೆಗಳಲ್ಲಿ ಕಸ ತುಂಬಿ ನಾರುತ್ತಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಬೀತಿಯಲ್ಲಿ ನಾಗರೀಕರು ಜೀವನ ನಡೆಸುವಂತಾಗಿದೆ.
ಚುನಾವಣೆಗೂ ಮುನ್ನಾ ನಗರ ನಿವಾಸಿಗಳಿಗೆ ಮೂಲ ಸಮಸ್ಯೆಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದ ಮುಖಂಡರು ಗೆದ್ದ ನಂತರ ಹಲವು ವಾರ್ಡ್‌ಳಲ್ಲಿ ಮುಖ ತೋರಿಸುತ್ತಿಲ್ಲ ಎಂಬ ಆರೋಪ ನಾಗರಿಕರಿಂದ ಕೇಳಿ ಬರುತ್ತಿದೆ. ಇನ್ನು ಮುಂದಾದರು ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸಿ ಕಸ ವೀಲೇವಾರಿ ಮಾಡಲು ಮುಂದಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.



-ಎನ್. ಬಾಬು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.